ಬೆಂಗಳೂರು:
ಬೆಂಗಳೂರು ನಗರ ಪೊಲೀಸ್ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಕಮಲ್ ಪಂತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಇಂದು ಭಾಸ್ಕರ್ ರಾವ್ ಸೇರಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ. ಗುಪ್ತಚರ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕರಾಗಿದ್ದ ಕಮಲ್ ಪಂತ್ ಅವರನ್ನು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ವರ್ಗಾಯಿಸಲಾಗಿದೆ.
ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ರಾಜ್ಯ ಸರ್ಕಾರ ಇಂದು ವರ್ಗಾಯಿಸಿ ಆದೇಶ ಹೊರಡಿಸಿದೆ. ಬೆಂಗಳೂರು ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/07/kamal.gif)