ಬೆಂಗಳೂರು
ಅಂತರ್ಜಲ ಸಂರಕ್ಷಣೆಗಾಗಿ ಅಂತರ್ಜಲ ಚೇತನ ಎಂಬ ಹೊಸ ಯೋಜನೆಯನ್ನು ರಾಜ್ಯದ 9 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಾಯೋಗಿಕ ಯೋಜನೆಯ ಸಾಧಕ-ಬಾಧಕ ನೋಡಿಕೊಂಡು ಇದನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆ ಮಾಡಲಾಗುವುದು ಎಂದರು.
ಗ್ರಾಮೀಣ ಪ್ರದೇಶದಲ್ಲಿನ ಶುದ್ಧ ಕುಡಿಯುವ ನೀರು ಘಟಕಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲು ಸಮಿತಿಯನ್ನು ರಚಿಸಲಾಗಿದೆ. ಎಲ್ಲಾ ನೀರಿನ ಘಟಕಗಳನ್ನು ಹಂತ ಹಂತವಾಗಿ ದುರಸ್ತಿ ಮಾಡಲಾಗುವುದು. ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತ್ರಿ ಯೋಜನೆಯನ್ನು ಮತ್ತಷ್ಟು ಜನಪ್ರಿಯಗೊಳಿಸಲು ಮತ್ತು ದುಡಿಯುವ ಜನರಿಗೆ ಕೆಲಸ ಕೊಡಲು ಈ ವರ್ಷ 5 ಲಕ್ಷ ಜನರಿಗೆ ಜಾಬ್ಕಾರ್ಡ್ಗಳನ್ನು ನೀಡುವ ಗುರಿ ಹೊಂದಲಾಗಿದೆ ಎಂದು ಸಚಿವರು ನುಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
