ಶಿರಾ:
ಇಲ್ಲಿನ ಪಿ.ಎಲ್.ಡಿ. ಬ್ಯಾಂಕಿನ ನೂತನ ಅಧ್ಯಕ್ಷರಾಗಿ ತೊಗರಗುಂಟೆಯ ಟಿ.ಡಿ.ಮಲ್ಲೇಶ್ ಹಾಗೂ ಉಪಾಧ್ಯಕ್ಷರಾಗಿ ಚಿರತಹಳ್ಳಿಯ ನಾಗರತ್ನಮ್ಮ ಅವಿರೋಧವಾಗಿ ಆಯ್ಕೆಯಾದರು.
ಇಲ್ಲಿನ ಪಿಕಾರ್ಡ್ ಬ್ಯಾಂಕಿನ ಅಧ್ಯಕ್ಷರು-ಉಪಾಧ್ಯಕ್ಷರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯ ಚುನಾವಣಾ ಪ್ರಕ್ರಿಯೆಯು ಚುನಾವಣಾಧಿಕಾರಿಯಾಗಿದ್ದ ಡಿ.ಆರ್.ಸಿ.ಎಸ್. ವೆಂಕಟೇಶ್ ಅವರ ಸಮ್ಮುಖದಲ್ಲಿ ಮಂಗಳವಾರ ನಡೆಸಲಾಯಿತು.
ಅಧ್ಯಕ್ಷ ಸ್ಥಾನಕ್ಕೆ ಟಿ.ದಿ.ಮಲ್ಲೇಶ್, ಕೆ.ಎಲ್.ಮುಕುಂದಪ್ಪ, ಉಪಾಧ್ಯಕ್ಷ ಸ್ಥಾನಕ್ಕೆ ನಾಗರತ್ನಮ್ಮ ನಾಮಪತ್ರ ಸಲ್ಲಿಸಿದ್ದರು. ಕೆ.ಎಲ್.ಮುಕುಂದಪ್ಪ ನಾಮಪತ್ರವನ್ನು ವಾಪಸ್ ಪಡೆದಿದ್ದರಿಂದ ಟಿ.ಡಿ.ಮಲ್ಲೇಶ್ ಅಧ್ಯಕ್ಷರಾಗಿ ಹಾಗೂ ನಾಗರತ್ನಮ್ಮ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ನೂತನವಾಗಿ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರನ್ನು ಬ್ಯಾಂಕಿನ ಸಿಬ್ಬಂಧಿ ಅಭಿನಂಧಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ