ಎಸ್.ನಾಗಣ್ಣ ಅವರಿಗೆ ಪತ್ರಿಕೋದ್ಯಮ ಪ್ರಶಸ್ತಿ

ತುಮಕೂರು
           ಪತ್ರಿಕೋದ್ಯಮದಲ್ಲಿ ಸಾಧಿಸಿರುವ ಗಣನೀಯ ಸಾಧನೆಯನ್ನು ಪರಿಗಣಿಸಿ ಮೈಸೂರಿನ ಶ್ರೀ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ತುಮಕೂರಿನ ಪ್ರಜಾಪ್ರಗತಿ ಸಂಪಾದಕ ಎಸ್.ನಾಗಣ್ಣ ಅವರಿಗೆ 2018ನೇ ಸಾಲಿನ ಹೆಚ್.ಕೆ.ವೀರಣ್ಣಗೌಡ ದತ್ತಿ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದೆ.
         
         ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಜೆ.ಶಶಿಧರ ಪ್ರಸಾದ್ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಎಸ್.ನಾಗಣ್ಣ ಅವರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು 15 ಸಾವಿರ ರೂ. ನಗದು ಮತ್ತು ಫಲಕವನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಡಿ.29 ರಂದು ಮೈಸೂರಿನ ಜಯಲಕ್ಷ್ಮಿ ಪುರಂನಲ್ಲಿರುವ ಶ್ರೀ ಕುವೆಂಪು ವಿದ್ಯಾವರ್ಧಕ ಟ್ರಸ್ಟ್‍ನಲ್ಲಿ ನಡೆಯಲಿದೆ ಎಂದು ಟ್ರಸ್ಟ್‍ನ ಅಧ್ಯಕ್ಷರಾದ ಡಾ.ಜೆ.ಶಶಿಧರ ಪ್ರಸಾದ್ ತಿಳಿಸಿದ್ದಾರೆ.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap