ಬೆಂಗಳೂರು
ಕೊಕೇನ್ ಮಾರಾಟ ಮಾಡುತ್ತಿದ್ದ ನೈಜೀರಿಯನ್ ಪ್ರಜೆಯನ್ನು ಬಂಧಿಸಿರುವ ಸಿಸಿಬಿ ಪೆÇಲೀಸರು 5 ಲಕ್ಷ ರೂ. ಮೌಲ್ಯದ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ.
ನೈಜೀರಿಯಾದ ಐಮೋ ರಾಜ್ಯದ ಕ್ರಿಶ್ಚಿಯನ್ ನವಬವನೆ (32) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಕಿತ್ತಗನೂರಿನ ಗಾರ್ಡನ್ ಸಿಟಿ ಕಾಲೇಜಿನ ಬಳಿ ಮಾರಾಟ ಮಾಡುತ್ತಿದ್ದಾಗ ಕಾರ್ಯಾಚರಣೆ ನಡೆಸಿದಾಗ ಸಿಸಿಬಿ ಪೆÇಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಬಂಧಿತ ಆರೋಪಿಯಿಂದ 5 ಲಕ್ಷ ರೂ. ಮೌಲ್ಯದ 75 ಗ್ರಾಂ ಕೊಕೇನ್, ಮೊಬೈಲ್, ಪಾಸ್ ಪೋರ್ಟ್ ಅನ್ನು ವಶಪಡಿಸಿಕೊಂಡು ಕೆ.ಆರ್. ಪುರಂ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಆರೋಪಿಯು ವ್ಯಾಪಾರಿ ವೀಸಾದಡಿ ಮುಂಬೈ ಬಂದು ಅಲ್ಲಿ ಪಾಸ್ ಪೋರ್ಟ್ ವೀಸಾ ನಿಯಮಗಳನ್ನು ಉಲ್ಲಂಘಿಸಿ ಕೊಕೇನ್ ಮಾರಾಟದಲ್ಲಿ ತೊಡಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ.