ಬೆಂಗಳೂರು
ಕೊಕೇನ್ ಮಾರಾಟ ಮಾಡುತ್ತಿದ್ದ ನೈಜೀರಿಯನ್ ಪ್ರಜೆಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಬಾಣಸವಾಡಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದ ಮೀರಾಕಲ್ ಚುಕ್ಕು ಹುಕ್ಕಾ (38) ಬಂಧಿತ ಆರೋಪಿಯಾಗಿದ್ದು ಆತನಿಂದ 12 ಗ್ರಾಂ, ಕೊಕೇನ್ 5 ಮೊಬೈಲ್ ಹಾಗೂ 10,200 ನಗದನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ವಿದ್ಯಾರ್ಥಿ ವೀಸಾ ಮೇಲೆ ನಗರಕ್ಕೆ ಬಂದಿದ್ದ ಆರೋಪಿಯು ಕಳೆದ ಕೆಲವು ವರ್ಷಗಳಿಂದ ಬಾಣಸವಾಡಿಯಲ್ಲಿ ಮನೆ ಮಾಡಿಕೊಂಡು ವಾಸಿಸುತ್ತಿದ್ದು ತಮ್ಮ ದೇಶದ ವಿದ್ಯಾರ್ಥಿಗಳು ಹಾಗೂ ಹೊರ ರಾಜ್ಯದ ಯುವಕರಿಗೆ ಕೊಕೇನ್ ಮಾರಾಟ ಮಾಡುತ್ತಿದ್ದ,ಆರೋಪಿಯ ಪಾಸ್ ಪೋರ್ಟ್ ವೀಸ್ ವಶಕ್ಕೆ ಪಡೆದುಕೊಂಡು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/02/201808252151163949_20-kg-gold-seized-two-arrested-in-Siliguri_SECVPF.jpg)