ಹೊಸಪೇಟೆ :
ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿ ಸೋಮವಾರ ಗ್ರಾಮದ 1ನೇ ವಾರ್ಡಿನಲ್ಲಿ ನೀರಿನ ಸಮಸ್ಯೆ ಹಾಗು ವಿದ್ಯುತ್ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಗ್ರಾ.ಪಂ.ಗೆ ಮುತ್ತಿಗೆ ಹಾಕಿ ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿದರು.ಗ್ರಾಮದ 1ನೇ ವಾರ್ಡಿನಲ್ಲಿ ಹಲವು ದಿನಗಳಿಂದ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ. ಇದರಿಂದ ಜನರಿಗೆ ತುಂಬಾ ತೊಂದರೆಯಾಗುತ್ತಿದೆ. ಮಹಿಳೆಯರು ನೀರಿಗಾಗಿ ಕಾದು ಕುಳಿತುಕೊಳ್ಳುವಂತಾಗಿದೆ. ಜೊತೆಗೆ ವಿದ್ಯುತ್ ಕೂಡ ಕಣ್ಣಾಮುಚ್ಚಾಲೆಯಾಡುತ್ತಿದೆ. ಬೇರೆ ಟ್ರಾನ್ಸ್‍ಫಾರ್ಮರ್ ವ್ಯವಸ್ಥೆ ಅಳವಡಿಸುವಂತೆ ಕೂಡಲೇ ಗ್ರಾ.ಪಂ.ಯವರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಗ್ರಾ.ಪಂ.ಯಲ್ಲಿ ಅಧ್ಯಕ್ಷರು ಹಾಗು ಪಿಡಿಒ ಗಳು ಇಲ್ಲದ ಕಾರಣ ಅವರು ಬರೋವರೆಗೂ ನಾವು ಇಲ್ಲಿಂದ ಕದಲುವುದಿಲ್ಲ ಎಂದು ಧರಣಿ ಕುಳಿತರು.
