ಶಿವಮೊಗ್ಗ;
ಬಿಜೆಪಿಯ ದಕ್ಷಿಣದ ಬಾಗಿಲನ್ನು ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಮಾಜಿ ಪ್ರದಾನಿ ಹೆಚ್.ಡಿ.ದೇವೇಗೌಡ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ನವೆಂಬರ್ 3 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಭಾಗವಹಿಸಿ, ಮಾತನಾಡುತ್ತಿದ್ದ ಅವರು, ನೆಹರು, ಇಂದಿರಾಗಾಂಧಿಯವರಿಂದಲೇ ಬಿಜೆಪಿ ಬಾಗಿಲು ಮುಚ್ಚಿಸಲು ಆಗಲಿಲ್ಲ, ಇನ್ನು ದೇವೇಗೌಡರ ಹೇಳಿಕೆ ಯಾವ ಲೆಕ್ಕ ಎಂದು ವ್ಯಂಗ್ಯವಾಡಿದರು.
ಮುಖ್ಯಮಂತ್ರಿಗಳು ಜನರಿಗೆ ಧೈರ್ಯ ತುಂಬುವ ಮಾತುಗಳನ್ನಾಡುವುದು ಬಿಟ್ಟು, ಯಾವಾಗಲೂ ಸಾಯುವ ಹೇಳಿಕೆ ನೀಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು? ಶಿವಮೊಗ್ಗ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಪ್ರಚಾರ ಮಾಡುವುದರಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ