ಬೆಂಗಳೂರು
ಡ್ರಗ್ ವಿಚಾರದಲ್ಲಿ ನನ್ನ ಹೆಸರು ತಳುಕು ಹಾಕಿ, ನನ್ನನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ನಾನು ಯಾವ ತಪ್ಪು ಮಾಡಿಲ್ಲ ಎಂದು ಶಾಸಕ ಜಮೀರ್ ಅಹಮದ್ ಖಾನ್ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಜನಾ ನನ್ನ ಜೊತೆ ಕೊಲಂಬೋಗೆ ಹೋಗಿದ್ದಾರೆ ಎಂದು ಮಾಧ್ಯಮಗಳಲ್ಲಿ ಆರೋಪ ಮಾಡಿದ್ದಾರೆ. ಸಂಜನಾ ಏನಾದರೂ ದಾಖಲೆ ಕೊಟ್ಟಿದ್ದಾರೆಯೇ ಎಂದು ಪ್ರಶ್ನೆ ಮಾಡಿದರು.
ಈಗ ಸಂಜನಾ ಬಿಟ್ಟು ಫಾಸಿಲ್ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ಎಲ್ಲೂ ತಪ್ಪು ಮಾಡಿಲ್ಲ.ಪೊಲೀಸರು ತನಿಖೆ ಮಾಡುತ್ತಿದ್ದಾರೆ .ನಂತರ ಸತ್ಯ ಹೊರಬರಲಿದೆ ಎಂದರು. ಸಂಜನಾ ಜೊತೆ ಜಮೀರ್ ಹೋಗಿದ್ದರು ಎಂದು ಹೇಳಿರುವ ಸಂಬರಗಿ, ನಾನು ಅವರ ಜೊತೆ ಹೋಗಿರುವ ಒಂದು ಫೋಟೋ ತೋರಿಸಲಿ ಎಂದರು.
ಸಂಬರಗಿ ವಿರುದ್ಧ ದೂರು ಕೊಟ್ಟಿದ್ದೇನೆ. ನಮ್ಮ ರಾಜ್ಯದ ಪೊಲೀಸರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ, ಅವರು ನನ್ನ ಮೇಲೆ ಎಲ್ಲೂ ಡ್ರಗ್ಸ್ ಆರೋಪ ಮಾಡಿಲ್ಲ ಎಂದರು.ಫಾಸಿಲ್ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಲಿ. ಫಾಸಿಲ್ ಗೂ ನನಗೂ ಯಾವುದೇ ಸಂಬಧವಿಲ್ಲ. ಮೂರು ವರ್ಷಗಳಿಂದ ಅವನು ನನಗೆ ಸಿಕ್ಕಿಯೇ ಇಲ್ಲ. ಉಮ್ರಾಗೆ ನಾನು ಹೋಗಿದ್ದೇನೆ. ಅಲ್ಲಿಗೆ ಎಲ್ಲರೂ ಬರುತ್ತಾರೆ . ಅವನೂ ಬಂದಿರಬಹುದು. ರಾಜ್ಯದಿಂದ ಸಾವಿರಾರು ಜನ ಬರುತ್ತಾರೆ ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ ಎಂದು ಹೇಳಿದರು.
ಕುಮಾರಸ್ವಾಮಿ ಆರೋಪ ವಿಚಾರಕ್ಕೆ ಉತ್ತರಿಸಿದ ಜಮೀರ್, ಕೊಲಂಬೋಗೆ ಹೋಗುವುದು ತಪ್ಪಾ? ನಾನು ನನ್ನ ಕುಟುಂಬದ ಜೊತೆ ಎರಡು ಬಾರಿ ಹೋಗಿದ್ದೇನೆ. ಕುಮಾರಸ್ವಾಮಿಯವರ ಜೊತೆಗೂ ಹೋಗಿದ್ದೇನೆ. ಜೆಡಿಎಸ್ ಶಾಸಕರ ಜೊತೆಗೂ ಕೊಲಂಬೋಗೆ ಹೋಗಿದ್ದೇವೆ. ಕೊಲೊಂಬೋಗೆ ಹೋದರೆ ಕ್ಯಾಸಿನೋಗೆ ಹೋದ ಹಾಗೆ ಅಲ್ಲ ಎಂದೂ ಜಮೀರ್ ಸಮರ್ಥಸಿಕೊಂಡರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/shp_10420_zameer.gif)