ಬಳ್ಳಾರಿ:
ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿದ್ದು ಸೋಮುವಾರ ದಇನ ಪಕ್ಷೇತರ ಅಭ್ಯಾರ್ಥಿಯಾಗಿ ಮಾನಸಿಕ ರೋಗದ ತಜ್ಞರಾದ ಡಾ|| ಟಿ.ಆರ್.ಶ್ರೀನಿವಾಸ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರ ಬೆಂಬಲಿಗರಾದ ಬಸವಾರಜ ದೇವರಮನೆ, ರಾಮಸಾಗರ ಶಿವಶಂಕರಗೌಡ, ಸತ್ಯನಾರಾಯಣ, ವೀರಬದ್ರಗೌಡ, ಹೊನ್ನುರಪ್ಪ, ನಾಗರಾಜ, ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಇದಕ್ಕೆ ಮುಂಚೆ ನಗರ ಆದಿದೇವತೆ ಕನಕದುರ್ಗಮ್ಮ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ತಮ್ಮ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ