ನಾಮಪತ್ರ ಸಲ್ಲಿಕೆ ಕಾರ್ಯ ಆರಂಭ

0
10

ಬೆಂಗಳೂರು:

        ರಾಜ್ಯದ ಶಿವಮೊಗ್ಗ, ಮಂಡ್ಯ ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರಗಳು ಹಾಗೂ ಜಮಖಂಡಿ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ತಿಂಗಳ 3 ರಂದು ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದಂತೆ, ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ.

       ನಾಮಪತ್ರಗಳನ್ನು ಸಲ್ಲಿಸಲು ಈ ತಿಂಗಳ 16 ಕೊನೆಯ ದಿನ. 17ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಈ ತಿಂಗಳ 20 ಕೊನೆಯ ದಿನವಾಗಿರುತ್ತದೆ. ಮತ ಎಣಿಕೆ ಮುಂದಿನ ತಿಂಗಳ 6ರಂದು ನಡೆದು ಅಂದೇ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ. ಈ ಉಪಚುನಾವಣೆಯಲ್ಲೂ ಮತದಾನಕ್ಕೆ ವಿದ್ಯುನ್ಮಾನ ಮತಯಂತ್ರಗಳು ಹಾಗೂ ವಿವಿಪ್ಯಾಟ್‍ಗಳನ್ನು ಬಳಕೆ ಮಾಡಲಾಗುತ್ತದೆ.

      ಸಂಬಂಧಪಟ್ಟ ಕ್ಷೇತ್ರಗಳ ಮತದಾರರಪಟ್ಟಿಯಲ್ಲಿ ಹೆಸರು ಹೊಂದಿರುವವರಿಗೆ ಮಾತ್ರ ಮತಚಲಾಯಿಸಲು ಅವಕಾಶವಿರುತ್ತದೆ. ಚುನಾವಣಾ ಪ್ರಕ್ರಿಯೆಗೆ ಒಟ್ಟು 34 ಸಾವಿರದ 433 ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here