ಬೆಂಗಳೂರು:
ರಾಜ್ಯದಲ್ಲಿ ಬಂದ್‍ಗೆ ಕರೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ನಗರದ ಸಿಟಿ ಸಿವಿಲ್ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಅಕ್ರಮ ಗಣಿಗಾರಿಕೆ ಹಗರಣ ಕುರಿತು ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ವರದಿಯನ್ವಯ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆ ಕಳೆದುಕೊಂಡ ಹಿನ್ನೆಲೆಯಲ್ಲಿ ಈಶ್ವರಪ್ಪ ಕರ್ನಾಟಕ ಬಂದ್‍ಗೆ ಕರೆಕೊಟ್ಟಿದ್ದರು. ಈ ಆರೋಪದ ಮೇಲೆ ನಗರದ ಸಿಟಿ ಸಿವಿಲ್ ಕೋರ್ಟ್‍ನ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ರಾಜ್ಯದಲ್ಲಿ ಚುನಾವಣಾ ಪ್ರಚಾರ ತೀವ್ರಗೊಂಡಿರುವ ಸಂದರ್ಭದಲ್ಲಿ ಈ ಕ್ರಮ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ದಿಢೀರ್ ಬಂದ್‍ಗೆ ಕರೆ ಕೊಟ್ಟ ಹಿನ್ನಲೆಯಲ್ಲಿ ಜನರು ತೊಂದರೆಗೆ ಒಳಗಾದರು. ಸಾರಿಗೆ ವ್ಯವಸ್ಥೆ ಸೇರಿದಂತೆ ಅನೇಕ ವ್ಯವಸ್ಥೆಗಳಿಲ್ಲದೆ ಜನರು ತೊಂದರೆ ಪಡುವಂತೆ ಆಯಿತು. ಅಲ್ಲದೆ ಸರಕಾರಿ ಸೇರಿದಂತೆ ಸಾರ್ವಜನಿಕರ ಆಸ್ತಿಪಾಸ್ತಿಗಳು ಹಾನಿಗೆ ಒಳಗಾಯಿತು. ಈ ರೀತಿ ಏಕಾಏಕಿ ಬಂದ್? ಕರೆ ನೀಡುವ ಅವಶ್ಯಕೆ ಏನಿತ್ತು ಎಂದು ವಕೀಲ ಧರ್ಮಪಾಲ್ ಖಾಸಗಿ ದೂರು ಸಲ್ಲಿಸಿದ್ದರು.
ಈ ಪ್ರಕರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗವಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಈಶ್ವರಪ್ಪ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್‍ನ್ನು
ಶಿವಮೊಗ್ಗದ ಪ್ರೇರಣಾ ಶಿಕ್ಷಣ ಸಂಸ್ಥೆಗಾಗಿ ಜಮೀನನ್ನು ಡಿ ನೋಟಿಫಿಕೇಷನ್ ಮಾಡಿ ಚೆಕ್ ಮುಖಾಂತರ ಹಣ ಪಡೆದ ಆರೋಪ ಹಾಗೂ ಗಣಿ ಹಗರಣದ ಕುರಿತು ಲೋಕಾಯುಕ್ತ ನ್ಯಾಯಮೂರ್ತಿ ವರದಿ ನೀಡಿದ್ದರು. ಈ ವರದಿಯಿಂದಾಗಿ ಮುಖ್ಯಮಂತ್ರಿ ಸ್ಥಾನದಿಂದಾಗಿ ಬಿಎಸ್ ಯಡಿಯೂರಪ್ಪ ಕೆಳಗೆ ಇಳಿಯುವಂತೆ ಆಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ