ಬೆಂಗಳೂರು
ಅಮಾನ್ಯಗೊಂಡಿರುವ ಐನೂರು ಸಾವಿರ ಮುಖಬೆಲೆಯ ನೋಟುಗಳನ್ನು ಹಳೆ ನೋಟುಗಳು ಮತ್ತೆ ಚಲಾವಣೆಗೆ ತರಲಿದ್ದಾರೆ ಎಂದು ನಂಬಿಸಿ ಹಳೇ ನೋಟು ಬದಲಾವಣೆ ದಂಧೆ ನಡೆಸುತ್ತಿದ್ದ ನಾಲ್ವರ ಗ್ಯಾಂಗನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಂದಿನಿ ಲೇಔಟ್‍ನ ರಮೇಶ್, ಸಕಾರಕ್, ಪ್ರಕಾಶ್, ವೆಂಕಟರಾಮ್ ಬಂಧಿತ ಆರೋಪಿಗಳಾಗಿದ್ದಾರೆ. ಮಡಿಕೇರಿ ಮೂಲದ ವ್ಯಕ್ತಿಯೊಬ್ಬರಿಂದ ಹಳೇ ನೋಟು ತಂದಿದ್ದ ನಾಲ್ವರು ಶೇ.20ರಷ್ಟು ಕಮೀಷನ್‍ಗೆ ಹಳೇ ನೋಟು ಕೊಟ್ಟು ಹೊಸ ನೋಟು ಪಡೆಯುತ್ತಿದ್ದರು.
ನೋಟು ಬದಲಾವಣೆ ದಂಧೆ ಮಾಡುತ್ತಿದ್ದ ಆರೋಪಿಗಳು ಬಿಜೆಪಿ ಸರ್ಕಾರದ ಅವಧಿ ಮುಗಿದ ಬಳಿಕ ಮತ್ತೆ ಹಳೇ ನೋಟು ಚಲಾವಣೆಗೆ ಬರಲಿದೆ ಎಂದು ಜನರಿಗೆ ಸುಳ್ಳು ಹೇಳಿ ಮೋಸ ಮಾಡುತ್ತಿದ್ದರು. ಈಗಾಗಲೇ ಹಲವು ಮಂದಿಗೆ ಇದೇ ರೀತಿ ಹೇಳಿ ಮೋಸ ಮಾಡಿದ್ದ ಈ ಗ್ಯಾಂಗ್, ಹಳೆ ನೋಟುಗಳನ್ನು ತೆಗೆದುಕೊಳ್ಳಲು ಸಾಕಷ್ಟು ಗಿರಾಕಿಗಳನ್ನು ಹೊಂದಿದ್ದರು.
ನಗರದ ನಂದಿನಿ ಲೇಔಟ್ ಬಸ್ ನಿಲ್ದಾಣದ ಬಳಿ 1,95 ಕೋಟಿ ರೂ. ಹಣ ಬದಲಾವಣೆಗಾಗಿ ಕಾದು ಕುಳಿತಿದ್ದ ವೇಳೆ ಖಚಿತ ಮಾಹಿತಿ ಪಡೆದ ಪೊಲೀಸರು ನಗದು ಸಮೇತ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ನಂದಿನಿ ಲೇಔಟ್ ಪೊಲೀಸರು ಈ ಗ್ಯಾಂಗಿನ ಪ್ರಮುಖ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಡಿಸಿಪಿ ಚೇತನ್‍ಸಿಂಗ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








