ಬೆಂಗಳೂರು:
ದೇಶದೆಲ್ಲಡೆ ದೊಡ್ಡ ಸಂಚಲನವನ್ನು ಮೂಡಿಸಿರುವ ಎನ್ಆರ್’ಸಿ ಅಭಿಯಾನವನ್ನು ಈಗ ಕರ್ನಾಟಕದಲ್ಲೂ ಅನುಷ್ಠಾನ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈಗಾಗಲೇ ನಾನು ಈ ಬಗ್ಗೆ ಸ್ಪಷ್ಟನೆ ನೀಡಿದ್ದು. ಕರ್ನಾಟಕದಲ್ಲಿ ಎನ್ಆರ್’ಸಿ ಜಾರಿಯಾಗುವುದು ಖಚಿತ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಈಗಾಗಲೇ ಅಕ್ರಮ ವಲಸಿಗರ ಕುರಿತು ಮಾಹಿತಿ ಸಂಗ್ರಹಿಸಲಾಗಿದ್ದು, ವರದಿಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗಿದೆ. ರಾಜ್ಯದ ಪ್ರಾಮಾಣಿಕ ನಾಗರೀಕರಿಗೆ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ. ಅಕ್ರಮ ವಲಸಿಗರು ಹಾಗೂ ರಾಜ್ಯದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳ ಕುರಿತು ಮತ್ತಷ್ಟು ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ