ಹೊನ್ನಾಳಿ:
ಎನ್ನೆಸ್ಸೆಸ್ನಿಂದ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಯುತ್ತದೆ. ಹಳ್ಳಿಗಾಡಿನ ಪರಿಸರದ ಪರಿಚಯ ವಿದ್ಯಾರ್ಥಿಗಳಿಗೆ ಆಗುತ್ತದೆ ಎಂದು ಕರ್ನಾಟಕ ಸಂಸ್ಕೃತ ವಿಶ್ವಿದ್ಯಾಲಯದ ನಿರ್ದೇಶಕ, ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ಸಂತೋಷ್ ಹಾನಗಲ್ ಹೇಳಿದರು.
ಇಲ್ಲಿನ ಚನ್ನಮಲ್ಲಿಕಾರ್ಜುನ ಸ್ವಾಮಿ ಸಂಸ್ಕೃತ ಮಹಾವಿದ್ಯಾಲಯದ ವತಿಯಿಂದ ಹಿರೇಕಲ್ಮಠದಲ್ಲಿ ಹಮ್ಮಿಕೊಂಡ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸ್ವಚ್ಛತೆಯ ಬಗ್ಗೆ ಎಲ್ಲರಲ್ಲೂ ಅರಿವು ಮೂಡಿಸುವುದು, ಶ್ರಮದಾನ ಶಿಬಿರಾರ್ಥಿಗಳ ಕರ್ತವ್ಯ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು.
ಸರ್ವ ಭಾಷೆಗಳಿಗೂ ತಾಯಿ ಭಾಷೆಯಾಗಿರುವ ಸಂಸ್ಕೃತ ಭಾಷೆಯನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಕೆಲವರು ಸಂಸ್ಕೃತ ಭಾಷೆಯನ್ನು ಮೃತ ಭಾಷೆ ಎಂದು ಹೇಳುತ್ತಾರೆ. ಇದು ಸರಿಯಲ್ಲ. ಎಲ್ಲಾ ಭಾಷೆಗಳಿಗೂ ಸಂಸ್ಕೃತವೇ ಮೂಲ ಎಂದು ವಿವರಿಸಿದರು.
ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಸ್ವಾಮಿ ಸಂಸ್ಕೃತ ಮಹಾವಿದ್ಯಾಲಯದ ಪ್ರಾಚಾರ್ಯ ಎಚ್.ಎಂ. ಶ್ರೀಗುರುಪ್ರಕಾಶ್, ಎನ್ನೆಸ್ಸೆಸ್ ಶಿಬಿರಾಧಿಕಾರಿ ಎಚ್.ಎಂ. ಮಂಜುನಾಥ್, ಶಿಬಿರಾರ್ಥಿ ಚನ್ನೇಶ್ ಎಂ. ಜಕ್ಕಾಳಿ ಮತ್ತಿತರರು ಮಾತನಾಡಿದರು.
ಶಿವಮೊಗ್ಗದ ಬೆಕ್ಕಿನಕಲ್ಮಠದ ಶ್ರೀ ಗುರುಬಸವೇಶ್ವರ ಸಂಸ್ಕೃತ ಮಹಾವಿದ್ಯಾಲಯದ ಪ್ರಾಚಾರ್ಯ ರೇಣುಕಾರಾಧ್ಯ, ಚನ್ನಮಲ್ಲಿಕಾರ್ಜುನ ಸ್ವಾಮಿ ಸಂಸ್ಕೃತ ಮಹಾವಿದ್ಯಾಲಯದ ನಿವೃತ್ತ ಮುಖ್ಯ ಶಿಕ್ಷಕ ಎಂ.ಆರ್. ಶ್ರೀಧರ ಶರ್ಮ, ಹಿರೇಕಲ್ಮಠದ ವ್ಯವಸ್ಥಾಪಕ ಎಂಪಿಎಂ ಚನ್ನಬಸಯ್ಯ, ಪ್ರತಿಮಾ ನಿಜಗುಣಶಾಸ್ತ್ರೀ ಮತ್ತಿತರರು ಉಪಸ್ಥಿತರಿದ್ದರು.ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಸ್ವಾಮಿ ಸಂಸ್ಕೃತ ಮಹಾವಿದ್ಯಾಲಯದ ನಿವೃತ್ತ ಮುಖ್ಯ ಶಿಕ್ಷಕ ಎಂ.ಆರ್. ಶ್ರೀಧರ ಶರ್ಮ ಅವರನ್ನು ಸನ್ಮಾನಿಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ