ನರ್ಸಿಂಗ್ ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಿ

ತುಮಕೂರು:

     ಇತ್ತೀಚಿನ ದಿನಗಳಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು, ರೋಗಿಗಳನ್ನು ಆರೈಕೆ ಮಾಡುವಾಗ ಅವರ ಸಮಸ್ಯೆಯನ್ನು ಗುರುತಿಸಿ, ಮಾನವೀಯ ನೆಲೆಗಟ್ಟಿನಲ್ಲಿ ಸೇವೆ ಮಾಡಬೇಕು, ವಿದ್ಯಾರ್ಥಿಗಳು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಹಾಗೂ ನರ್ಸಿಂಗ್ ಕ್ಷೇತ್ರದಲ್ಲಿ ಕಲಿಕೆಗೆ ಯಾವುದೇ ಕೊನೆಯಿಲ್ಲ ಹಾಗೂ ವಿದ್ಯಾರ್ಥಿಗಳಿಗೆ ಪ್ರೀತಿಯ ಒಲವುವನ್ನು ಸೇರಿಸಿ ರೋಗಿಗಳ ಸೇವೆ ಮಾಡಲು ಸಲಹೆ ನೀಡಬೇಕು ಎಂದು ಬೆಂಗಳೂರಿನ ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನದ ವಿಶ್ವವಿದ್ಯಾನಿಲಯದ ಡೆಪ್ಯೂಟಿ ರಿಜಿಸ್ಟ್ರಾರ್‍ರಾದ ಡಾ.ಪ್ರಾಣೇಶ್ ಗೂಡುರ್ ತಿಳಿಸಿದರು.

      ನಗರದ ಶ್ರೀದೇವಿ ನರ್ಸಿಂಗ್ ಕಾಲೇಜು ಹಾಗೂ ಶ್ರೀ ರಮಣಮಹರ್ಷಿ ನರ್ಸಿಂಗ್ ಕಾಲೇಜಿನ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರಥಮ ವರ್ಷದ ಡಿಪ್ಲೋಮಾ ನರ್ಸಿಂಗ್ ಮತ್ತು ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿಗಳಿಗೆ ಜ್ಯೋತಿ ಬೆಳಗಿಸುವ ಕಾರ್ಯಕ್ರಮ ಮತ್ತು ಕಾಲೇಜು ವಾರ್ಷಿಕೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

      ಶ್ರೀ ರಮಣ ಮಹರ್ಷಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದಯಾನಂದ್‍ರವರು ವರ್ಷದ ವಾರ್ಷಿಕ ವರದಿಯನ್ನು ಮಂಡಿಸಿದ್ದರು. ಸಮಾರಂಭದಲ್ಲಿ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಡಿ.ಕೆ. ಮಹಾಬಲರಾಜುರವರು ಮಾತನಾಡಿ, ಜ್ಯೋತಿ ಬೆಳಗಿಸುವುದರ ಹಿಂದಿನ ಮಹತ್ವವನ್ನು ತಿಳಿಸಿದರು.

       ಹಾಗೂ ಜ್ಯೋತಿ ಬೆಳಗಿಸುವ ಉದ್ದೇಶ ಕತ್ತಲಿನಿಂದ ಬೆಳಕಿನ ಕಡೆಗೆ ಹೋಗುವುದು ಅರ್ಥವೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ವೈದ್ಯರು ಹಾಗೂ ರೋಗಿಗಳ ಮಧ್ಯೆ ಶುಶ್ರೂಷಕರು ಸೇತುವೆಯಾಗಿ ಹೇಗೆ ಕಾರ್ಯನಿರ್ವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಶ್ರೀದೇವಿ ಛಾರಿಟಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್‍ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

       ತುಮಕೂರಿನ ಸರ್ಕಾರಿ ಪ್ಯಾರಾಮೆಡಿಕಲ್ ಪ್ರಾಂಶುಪಾಲರಾದ ಪ್ರೊ.ಚಿಕ್ಕಹನುಮಂತಯ್ಯರವರು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಜ್ಯೋತಿ ಬೆಳಗಿಸಿ, ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಸ್ತುತ ಆರೋಗ್ಯದ ಕ್ಷೇತ್ರದಲ್ಲಿ ಬದಲಾವಣೆಯಾಗುತ್ತಿದ್ದು, ವೃತ್ತಿಪರದಲ್ಲಿ ನರ್ಸಿಂಗ್ ಕ್ಷೇತ್ರ ಉತ್ತಮವಾಗುತ್ತದೆ, ನರ್ಸಿಂಗ್ ವಿದ್ಯಾರ್ಥಿಗಳು ಉತ್ತಮ ಶುಶ್ರೂಷಕರಾಗಲು ಅಗತ್ಯವಾದ ಗುಣಗಳನ್ನು ಬೆಳಸಿಕೊಳ್ಳಬೇಕು ಎಂದರು.

      ಉಪಪ್ರಾಂಶುಪಾಲರಾದ ಪ್ರೊ. ಆರ್.ಕೆ. ಮುನಿಸ್ವಾಮಿರವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಶ್ರೀದೇವಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆಚ್. ಲಲಿತಾರವರು, ನರ್ಸಿಂಗ್ ಕೋರ್ಸ್ ಮಹತ್ವ ಹಾಗೂ ಉದ್ಯೋಗದ ಬೇಡಿಕೆಯ ಬಗ್ಗೆ ಸ್ವವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಹಾಗೂ ಮೂಲಭೂತ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಹೆಚ್ಚು ಹೆಚ್ಚು ಕಲಿಕಾ ಪ್ರಯೋಗಗಳು ಒಳಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳು ಜೀವನದಲ್ಲಿ ಲಭಿಸುವ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

        ಶ್ರೀದೇವಿ ಕಾಲೇಜಿನ ಆಡಳಿತಾಧಿಕಾರಿಯಾದ ಟಿ.ವಿ. ಬ್ರಹ್ಮದೇವಯ್ಯರವರು ಮಾತನಾಡುತ್ತಾ ವಿದ್ಯಾರ್ಥಿಗಳು ಜೀವನದಲ್ಲಿ ಲಭಿಸುವ ಅವಕಾಶಗಳನ್ನು ಸದ್ಭಳಕೆ ಮಾಡಿಕೊಂಡು, ವೃತ್ತಿ ಜೀವನದಲ್ಲಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ನರ್ಸಿಂಗ್ ವಿದ್ಯಾರ್ಥಿಗಳು ಉತ್ತಮ ಶುಶ್ರೂಷಕರಾಗಲು ಅಗತ್ಯವಾದ ಗುಣಗಳನ್ನು ಬೆಳಸಿಕೊಳ್ಳಬೇಕು ಹಾಗೂ ತೀವ್ರಗತಿಯ ತಾಂತ್ರಿಕ ಬದಲಾವಣೆ ಹಾಗೂ ವೈದ್ಯಕೀಯ ಉಪಕರಣಗಳ ಬದಲಾವಣೆಗಳನ್ನು ಅತ್ಯುತ್ತಮವಾದ ದಿನನಿತ್ಯದ ಕೆಲಸ ಕಾರ್ಯಗಳನ್ನು ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ತಿಳಿಸಿದರು.

       ಕಾರ್ಯಕ್ರಮದಲಿ ಪ್ರಾಂಶುಪಾಲರಾದ ಡಾ. ಹೆಚ್. ಲಲಿತಾ, ಪ್ರೊ. ದಯಾನಂದ್, ಪ್ರೊ. ಈಶ್ವರಪ್ಪ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap