ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಕಡಿತ ಇಲ್ಲ : ಎಸ್ ಟಿ ಎಸ್

ಬೆಂಗಳೂರು

    ಹಾಲು ಉತ್ಪಾದಕರಿಗೆ ಸರ್ಕಾರದಿಂದ ನೀಡಲಾಗುತ್ತಿರುವ 5 ರೂ.ಗಳ ಪ್ರೋತ್ಸಾಹಧನವನ್ನು ಕಡಿತ ಮಾಡುವ ಚಿಂತನೆ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ರೈತರಿಗೆ ಯಾವುದೇ ಕಾರಣಕ್ಕೂ ಸಹಾಯಧನದಲ್ಲಿ ಕಡಿತ ಮಾಡುವುದಿಲ್ಲ. ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲೂ ಪ್ರೋತ್ಸಾಹ ಧನದಲ್ಲಿ ಕಡಿತ ಮಾಡುವುದಿಲ್ಲ ಎಂದಿದ್ದಾರೆ.

    ಹಾಲಿನ ಜೊತೆಗೆ ಹಾಲಿನ ಪೂರಕ ಉತ್ಪನ್ನಗಳನ್ನು ಉತ್ಪಾದಿಸಲು ಹೆಚ್ಚಿನ ಒತ್ತು ನೀಡುವುದರಿಂದ ರೈತರಿಗೆ ಅಧಿಕ ಲಾಭ ದೊರೆತು ಅವರ ಏಳಿಗೆಗೆ ಸಹಾಯಕವಾಗಲಿದೆ. ಇತರ ಹಾಲು ಒಕ್ಕೂಟಗಳಲ್ಲಿ ಸಂಗ್ರಹವಾಗುವ ಅಧಿಕ ಹಾಲನ್ನು ಇಲ್ಲಿಗೆ ಕಳುಹಿಸಿಕೊಟ್ಟಲ್ಲಿ ಈ ಘಟಕದಲ್ಲಿ ಹಾಲಿನ ಪುಡಿಯನ್ನಾಗಿ ಪರಿವರ್ತಿಸಿಕೊಡಲಾಗುವುದು. ನಿಗದಿತ ದರದಂತೆ ಪುಡಿಯನ್ನಾಗಿ ಪರಿವರ್ತಿಸಿಕೊಡಲಾಗುತ್ತದೆ ಎಂದು ತಿಳಿದರು.

     ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿರುವ ನೂತನ ಹಾಲು ಸಂಸ್ಕರಣಾ ಮತ್ತು ಹಾಲಿನ ಪುಡಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಹೈನುಗಾರಿಕೆ ಉತ್ಪನ್ನಗಳನ್ನು ಹೆಚ್ಚಾಗಿ ಉತ್ಪಾದಿಸುವುದರಿಂದ ರೈತರಿಗೆ ಅಧಿಕ ಆದಾಯ ಸಿಗುತ್ತದೆ. ಹಾಲಿನ ಜೊತೆಗೆ ಅದರ ಉಪ ಉತ್ಪನ್ನಗಳು ಹಾಲು ಉತ್ಪಾದಕರಿಗೆ ಅಧಿಕ ವರಮಾನ ತಂದುಕೊಡುವಲ್ಲಿ ನೆರವಾಗಲಿದೆ. ಇದು ರೈತರ ವೈಯಕ್ತಿಕ ಏಳಿಗೆಗೂ ಸಹಾಯಕ ಎಂದು ಅಭಿಪ್ರಾಯಪಟ್ಟರು.

     ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಅಧಿಕ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿದ್ದು, ಇಲ್ಲಿರುವ ಘಟಕ ಹಾಲನ್ನು ಪೌಡರ್ ಆಗಿ ಪರಿವರ್ತಿಸುವ ದೊಡ್ಡ ಘಟಕವಾಗಿದೆ. ರಾಜ್ಯದಲ್ಲೇ ಅಧಿಕ ಪ್ರಮಾಣದಲ್ಲಿ ಹಾಲಿನ ಪುಡಿಯನ್ನು ಇಲ್ಲಿ ಉತ್ಪಾದಿಸಲಾಗುತ್ತಿದೆ. ಈ ಘಟಕದಲ್ಲಿ ಉತ್ಪಾದನೆಯಾಗುವ ಹಾಲಿನ ಪುಡಿಗೆ ಹೆಚ್ಚು ಬೇಡಿಕೆ ಇದೆ ಎಂದು ಹೇಳಿದರು.

      ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿ ಕನ್ನಮಂಗಲದಲ್ಲಿ ಒಟ್ಟು 125 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಹಾಲು, ಸಂಸ್ಕರಣಾ ಮತ್ತು ಹಾಲಿನ ಪುಡಿ ಉತ್ಪಾದಿಸುವ ಘಟಕ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡಿದೆ. ಸದ್ಯಕ್ಕೆ ಇಡೀ ದೇಶದಲ್ಲೇ ಅತ್ಯುತ್ತಮ ಮತ್ತು ನಂಬರ್ ಒನ್ ಹಾಲಿನ ಪುಡಿ ಘಟಕ ಎನಿಸಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

       ಕೋವಿಡ್-19 ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಗೆ ಹಾಲು ಸಬರಾಜು ಸ್ಥಗಿತಗೊಂಡಿದೆ. ಅಲ್ಲದೆ, ಸಣ್ಣ ಪುಟ್ಟ ಕಾಫಿ ? ಟೀ ಅಂಗಡಿಗಳು ಸಹ ಮುಚ್ಚಿವೆ. ಹೀಗಾಗಿ ರಾಜ್ಯಲ್ಲಿ ಉತ್ಪಾದನೆಯಾಗುವ ಹಾಲನ್ನು ಪೌಡರ್ ಆಗಿ ಪರಿವರ್ತಿಸಿ ಶೇಖರಿಸಿ ಇಟ್ಟುಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಸಧ್ಯಕ್ಕೆ ಹಾಲಿನ ಪುಡಿ ದಾಸ್ತಾನಿನ ಪ್ರಮಾಣ ಅಧಿಕವಾಗಿದೆ. ಒಟ್ಟಾರೆಯಾಗಿ ಸುಮಾರು 28 ಲಕ್ಷ ಮೆಟ್ರಿಕ್ ಟನ್ ನಷ್ಟು ದಾಸ್ತಾನು ಇದೆ ಎಂದರು.

       ಕೋವಿಡ್ ಸಂದರ್ಭದಲ್ಲಿ ರಾಜ್ಯದ 8.5 ಲಕ್ಷ ಹೈನುಗಾರರಿಂದ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಸುಮಾರು 79 ಕೋಟಿ ರೂ. ವೆಚ್ಚದಲ್ಲಿ ಹಾಲು ಖರೀದಿಸಿದೆ. ಹೀಗೆ ಖರೀದಿಸಿರುವ ಹಾಲನ್ನು ರಾಜ್ಯದಲ್ಲಿ ನಗರಸಭೆ ಮತ್ತು ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉಚಿತವಾಗಿ ಹಂಚಲಾಗಿದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap