ಹಾವೇರಿ
ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಪೇದೆಗಳು ಹಾಗೂ ಕುಟುಂಬದ ಸದಸ್ಯರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಚಲಾಯಿಸುವ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.
ಕೆರೆಮತ್ತಿಹಳ್ಳಿ ಪೊಲೀಸ್ ಪರೇಡ್ ಮೈದಾನದಲ್ಲಿ ಮಂಗಳವಾರ ಆಯೋಜಿಸಿದ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲೀಲಾವತಿ ಪೊಲೀಸ್‍ರಿಗೆ ಮತದಾನ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮಮ ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವ ಎಂದು ಪ್ರತಿಜ್ಞಾವಿಧಿ ಬೋಧಿಸಿದರು.
ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು. ಇದೇ ಎಪ್ರಿಲ್ 23 ರ ಮಂಗಳವಾರ ಬೆಳಿಗ್ಗೆ 7 ರಿಂದ 6 ಗಂಟೆವರೆಗೆ ನಡೆಯುವ ಮತದಾನದಲ್ಲಿ ಅರ್ಹ ಮತದಾರರು ತಪ್ಪದೇ ಭಾಗವಹಿಸಿ ಮತ ಚಲಾಯಿಸಿ ಎಂದು ಮನವಿ ಮಾಡಿಕೊಂಡರು.ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ನಿವೃತ್ತ ಪಿ.ಎಸ್.ಐ. ಎಫ್. ಎಂ.ಹಂಸನೂರ ಹಾಗೂ ವಿವಿಧ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.