ಡಿ30ಕ್ಕೆ ಒನಕೆ ಓಬವ್ವ ಜಯಂತೋತ್ಸವ

ಚಿತ್ರದುರ್ಗ:  

           ಒನಕೆಯಿಂದ ಶತ್ರುಗಳನ್ನು ಸದೆಬಡಿದು ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ರಕ್ಷಿಸಿದ ವೀರವನಿತೆ ಒನಕೆ ಓಬವ್ವ ಜಯಂತ್ಯೋತ್ಸವವನ್ನು ಡಿ.30 ರಂದು ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಸಲಾಗುವುದೆಂದು ವೀರವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಸಮಿತಿ ಕಾರ್ಯಾಧ್ಯಕ್ಷ ಹೆಚ್.ಸಿ.ನಿರಂಜನಮೂರ್ತಿ ತಿಳಿಸಿದರು.

           ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಅಂದು ಬೆಳಿಗ್ಗೆ ಹೊಳಲ್ಕೆರೆ ರಸ್ತೆಯಲ್ಲಿರುವ ಕನಕವೃತ್ತದಿಂದ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ಹೊರಡಲಿದೆ. ಎಲ್ಲರನ್ನೂ ಒಗ್ಗೂಡಿಸುವ ಉದ್ದೇಶದಿಂದ ಒನಕೆ ಓಬವ್ವ ಜಯಂತಿ ನಡೆಸುತ್ತಿದ್ದೇವೆ. ರಾಜ್ಯದ ಉಪಮುಖ್ಯಮಂತ್ರಿ ಸೇರಿದಂತೆ ಛಲವಾದಿ ಜನಾಂಗದ ಅನೇಕ ನಾಯಕರುಗಳು ಜಯಂತಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

         2007 ರಲ್ಲಿ ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿಯನ್ನು ಚಿತ್ರದುರ್ಗದಲ್ಲಿ ಆಚರಿಸಿದ್ದೆವು. ಇನ್ನು ಮುಂದೆ ಪ್ರತಿ ವರ್ಷವೂ ಸರ್ಕಾರವೇ ಒನಕೆ ಓಬವ್ವ ಜಯಂತಿಯನ್ನು ಆಚರಿಸಲಿ ಎಂಬುದು ನಮ್ಮ ಬೇಡಿಕೆ ಎಂದರು.ಛಲವಾದಿ ಗುರುಪೀಠದ ಬಸವನಾಗಿ ದೇವಸ್ವಾಮಿ ಮಾತನಾಡಿ ಒನಕೆ ಓಬವ್ವನ ವಂಶಸ್ಥರೂ ಈಗಲೂ ಚಿತ್ರದುರ್ಗದಲ್ಲಿದ್ದಾರೆ. ನಾವೂ ಕೂಡ ಓಬವ್ವಳ ವಂಶಸ್ತರೆ. ಮೂರನೇ ತಲೆಮಾರಿನವರು. ಓಬವ್ವಳ ವಂಶಸ್ಥರಿದ್ದಾರೆಂಬುದಕ್ಕೆ ಅನೇಕ ದಾಖಲೆಗಳಿವೆ. ಒನಕೆ ಓಬವ್ವ ಸ್ಮಾರಕಕ್ಕೆ ರಾಜ್ಯ ಸರ್ಕಾರ ಐದು ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಚಿತ್ರದುರ್ಗದಲ್ಲಿ ಎಲ್ಲಿಯಾದರೂ ಒಂದು ಎಕರೆ ಜಾಗ ಸಿಕ್ಕ ಕೂಡಲೆ ಸ್ಮಾರಕ ಸಿದ್ದವಾಗಲಿದೆ ಎಂದು ತಿಳಿಸಿದರು.

        ಛಲವಾದಿ ಸಮಾಜದ ಜನಪ್ರತಿನಿಧಿಗಳು, ಅಧಿಕಾರಿಗಳು ಜಯಂತ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಜಾನಪದ ಕಲಾತಂಡಗಳ ಮೆರವಣಿಗೆಯಲ್ಲಿ ಛಲವಾದಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸರ್ಕಾರಕ್ಕೆ ಶಕ್ತಿ ಪ್ರದರ್ಶಿಸಬೇಕಿದೆ ಎಂದು ಮನವಿ ಮಾಡಿದರು.
ಛಲವಾದಿ ಗುರುಪೀಠ ಟ್ರಸ್ಟ್‍ನ ಅಧ್ಯಕ್ಷ ಎನ್.ಲಕ್ಷ್ಮಿನರಸಯ್ಯ, ಶಾರದಬ್ರಾಸ್ ಬ್ಯಾಂಡ್‍ನ ಎಸ್.ವಿ.ಗುರುಮೂರ್ತಿ, ಎಸ್.ಎನ್.ರವಿಕುಮಾರ್ , ಎಸ್.ಹೆಚ್.ಪರಮೇಶ್, ಪ್ರೊ.ಡಿ.ಹೆಚ್.ನಟರಾಜ್ ಇನ್ನು ಮುಂತಾದವರು ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link