ಅ. 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ

ದಾವಣಗೆರೆ 

         ಜಿಲ್ಲಾ ಮಟ್ಟದಲ್ಲಿ ಅ.23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

       ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸುವ ಕುರಿತು ಚರ್ಚಿಸಲು ಇಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

        ಸಮಾಜದ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಅವರು ಮಾತನಾಡಿ ಕುವೆಂಪು ಕನ್ನಡ ಭವನದಲ್ಲಿ ಬೆಳಿಗ್ಗೆ 11 ಕ್ಕೆ ವೇದಿಕೆ ಕಾರ್ಯಕ್ರಮ ನಿಗದಿಗೊಳಿಸಲಾಗಿದೆ. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಹಂಚಿಕೆ, ವೇದಿಕೆ ಮತ್ತು ಸಂಗೀತ ಕಾರ್ಯಕ್ರಮ, ನಗರದಲ್ಲಿ ಜಯಂತಿ ಕುರಿತಾದ ಫ್ಲೆಕ್ಸ್ ಅಳವಡಿಕೆಯನ್ನು ಕನ್ನಡ ಮತ್ತು ಸಂಸ್ಕತಿ ಇಲಾಖೆ ನಿರ್ವಹಿಸಲಿದೆ ಎಂದರು.

       ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಬಿ.ಸಿ.ಉಮಾಪತಿ ಮಾತನಾಡಿ, ದಾಖಲೆಗಳ ಪ್ರಕಾರ ಕಿತ್ತೂರು ರಾಣಿ ಚೆನ್ನಮ್ಮ ಜನ್ಮದಿನ ನವೆಂಬರ್ 11 ಆಗಿರುತ್ತದೆ. ಅಕ್ಟೋಬರ್ 23 ಅವರು ವಿಜಯ ಸಾಧಿಸಿದ ದಿನವಾಗಿದ್ದು, ಅದು ವಿಜಯೋತ್ಸವ ದಿನವಾಗಿದೆ. ಈ ಬಗ್ಗೆ ದಾಖಲೆಗಳಿದ್ದು ಸರ್ಕಾರದ ಗಮನ ಸೆಳೆಯಬೇಕೆಂದು ಮನವಿ ಮಾಡಿದರು. ಹಾಗೂ ಕಾರ್ಯಕ್ರಮದಲ್ಲಿ ಉಪನ್ಯಾಸ ಮತ್ತು ಸಾನಿಧ್ಯವನ್ನು ಪಂಚಮಸಾಲಿ ಹರಿಹರ ಪೀಠದ ವಚನಾನಂದ ಶ್ರೀಗಳು ವಹಿಸಲಿದ್ದಾರೆ. ಈ ಕುರಿತು ಅವರೊಂದಿಗೆ ಮಾತನಾಡಲಾಗಿದೆ ಎಂದು ತಿಳಿಸಿದರು.

     ಅಪರ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಅ.23 ವಿಜಯೋತ್ಸವ ದಿನವೆಂಬ ದಾಖಲೆ ನೀಡಿದಲ್ಲಿ ಆ ದಾಖಲೆ ಹಾಗೂ ಸಭಾ ನಡವಳಿಯನ್ನು ಸರ್ಕಾರದ ಗಮನಕ್ಕೆ ಕಳುಹಿಸಿಕೊಡಲಾಗುವುದು ಎಂದರು.

     ಸಭೆಯಲ್ಲಿ ಜಿಲ್ಲಾ ಪಂಚಮಸಾಲಿ ಸಮಾಜದ ಕಾರ್ಯದರ್ಶಿ ಹೆಚ್.ಬಿ.ನಟರಾಜ್, ಸಮಾಜದ ಮುಖಂಡರಾದ ಮಹಲಿಂಗಪ್ಪ, ಎಂ ದೊಡ್ಡಪ್ಪ, ರವಿಕುಮಾರ್, ಗೀತಾ, ಉಮಾ, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದೇವೇಂದ್ರಪ್ಪ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಶಿವಪ್ರಸಾದ್, ಜವಳಿ ಮತ್ತು ಕೈಮಗ್ಗ ಇಲಾಖೆಯ ಉಪ ನಿರ್ದೇಶಕ ಸಫಾರೆ ಶ್ರೀನಿವಾಸ್, ಮೀನುಗಾರಿಕೆ ಇಲಾಖೆಯ ಡಿಡಿ ಡಾ.ಉಮೇಶ್, ಮಹಾನಗರಪಾಲಿಕೆಯ ಡಾ.ಸುಂಕದ್, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link