ಬಳ್ಳಾರಿ
ಬಳ್ಳಾರಿ ಲೋಕಸಭಾ ಉಪಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.24ರಂದು ಸರಳವಾಗಿ ಆಚರಿಸಲಾಗುತ್ತಿದೆ. ಅ.24ರಂದು ಬೆಳಗ್ಗೆ 10ಕ್ಕೆ ನಗರದ ವಾಲ್ಮೀಕಿ ವೃತ್ತ(ಎಸ್ಪಿ ಸರ್ಕಲ್)ದ ಬಳಿಯಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರ ಮೂಲಕ ಆಚರಿಸಲಾಗುತ್ತದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪಿ.ಶುಭಾ ಅವರು ತಿಳಿಸಿದ್ದಾರೆ.
ಈ ಮುಂಚೆ ಸೀಗೆ ಹುಣ್ಣಿಮೆ ದಿನದಂದು ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ರಾಜ್ಯಮಟ್ಟದ ಹಬ್ಬವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಅ.10ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿತ್ತು. ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆ ಅದನ್ನು ರದ್ದುಗೊಳಿಸಿ, ಸರಳವಾಗಿ ಆಚರಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
