ಜಮ್ಮು:
ಜಮ್ಮು ಮತ್ತು ಕಾಶ್ಮೀರದ ಕಿಶಾರ್ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದೀನ್ ಉಗ್ರರಿಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ಗ್ರಾಮ ರಕ್ಷಣಾ ಸಮಿತಿ ಸದಸ್ಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ನವೆಂಬರ್‌ನಲ್ಲಿ ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದ ತಾರಿಖ್ ಹುಸೈನ್ ಎಂಬಾತನ ವಿಚಾರಣೆ ವೇಳೆ ಆತ, ತನಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದು ಕಿಶಾರ್‌ನ ದೇವಿ ದಾಸ್ ಎಂದು ಬಾಯಿಬಿಟ್ಟಿದ್ದಾನೆ. ಅದರ ಆಧಾರದಲ್ಲಿ ದಾಸ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮತ್ತೂಂದು ಘಟನೆಯಲ್ಲಿ, ಪಾಕಿಸ್ತಾನದ ಯುವತಿಯ ಹನಿಟ್ರ್ಯಾಪ್ ಜಾಲಕ್ಕೆ ಬಿದ್ದು, ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ರವಾನಿಸಿದ ಆರೋಪದಲ್ಲಿ ಗಡಿ ಗ್ರಾಮ ಅರ್ನಿಯಾದ ರಾಕೇಶ್ ಕುಮಾರ್ ಎಂಬಾತನನ್ನು ಮಂಗಳವಾರ ಬಂಧಿಸಲಾಗಿದೆ. ಈತನ ವಿರುದ್ಧ ಬೇಹುಗಾರಿಕೆ ಆರೋಪವನ್ನೂ ಹೊರಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








