ಬೆಂಗಳೂರು
ಹಲವು ಬಾರಿ ಮಾದಕ ವಸ್ತು ಮಾರಾಟ, ಸಂಗ್ರಹದಲ್ಲಿ ಪಾಲ್ಗೊಂಡಿದ್ದ ರೌಡಿಶೀಟರ್ ಓರ್ವನನ್ನು ಎನ್ ಡಿಪಿಎಸ್ ಕಾಯ್ದೆ ಅಡಿ ಪೊಲೀಸರು ಬಂಧಿಸಿದ್ದಾರೆ.
ಕೆಜಿ ಹಳ್ಳಿ ರೌಡಿಶೀಟರ್ ಸೈಯದ್ ನಾಜೀಮ್ (41)ಎನ್ ಡಿಪಿಎಸ್ ಕಾಯ್ದೆ ಅಡಿ ಬಂಧಿತ ಎರಡನೇ ಆರೋಪಿ.ಸೈಯದ್, 2009ರಿಂದ ಗಾಂಜಾ ಮಾರಾಟ ಕೇಸ್ ನಲ್ಲಿ ಭಾಗಿಯಾಗಿದ್ದನು. ಈಗಾಗಲೇ ಈತನ ವಿರುದ್ಧ 6 ಪ್ರಕರಣಗಳು ದಾಖಲಾಗಿದ್ದು, ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದನು. ನಂತರ ಮತ್ತೆ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಹಿನ್ನೆಲೆಯಲ್ಲಿ ಈತನ ವಿರುದ್ಧ ರೌಡಿಪಟ್ಟಿ ತೆರೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಎನ್ ಡಿಪಿಎಸ್ ಕಾಯ್ದೆ ಅಡಿ ಆತನನ್ನು ಬಂಧನಗೊಳಿಸಲು ಕೆಜಿ ಪೊಲೀಸರು ಪ್ರಸ್ತಾವನೆ ಸಲ್ಲಿಸಿದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರ ಆದೇಶದ ಮೇರೆಗೆ ಪೊಲೀಸರು ಸೈಯದ್ ನನ್ನು ಬಂಧಿಸಿದ್ದಾರೆ.ಸದ್ಯ ಸೈಯ್ಯದ್ ನನ್ನು ಕೆಜಿ ಹಳ್ಳಿ ಪೊಲೀಸರು ಬಂಧಿಸಿ, ಕೇಂದ್ರಕಾರಾಗೃಹ ವಶಕ್ಕೆ ನೀಡಿದ್ದಾರೆ. ಈ ಹಿಂದೆ ಮೊದಲ ಬಾರಿಗೆ ಈ ಕಾಯ್ದೆ ಅಡಿ ನೈಜೀರಿಯಾ ಪ್ರಜೆಯನ್ನು ಬಂಧಿಸಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
