ಬೆಂಗಳೂರು
ಸ್ನೇಹಿತರ ಜೊತೆ ಪಾರ್ಟಿ ಮಾಡಲು ಬಂದಿದ್ದ ಯುವಕನೋರ್ವನನ್ನು ಬಿಯರ್ ಬಾಟಲಿಯಿಂದ ಹೊಡೆದು ಬರ್ಬರವಾಗಿ ಕೊಲೆಗೈದಿರುವ ದುಷ್ಕರ್ಮಿಗಳು ಪರಾರಿಯಾಗಿರುವ ದುರ್ಘಟನೆ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆಯಾಗಿರುವ ಯುವಕ ಸುಮಾರು 30 ವರ್ಷ ವಯಸ್ಸಿನವನಾಗಿದ್ದುಸದ್ಯಕ್ಕೆ ಆತನ ಹೆಸರು ವಿಳಾಸ ಪತ್ತೆಯಾಗಿಲ್ಲ . ಭಾನುವಾರ ರಾತ್ರಿ ಮುತ್ತಗಟ್ಟಿ ರಸ್ತೆಯ ತಿಮ್ಮರಾಯಸ್ವಾಮಿ ಲೇಔಟ್‍ಗೆ ಸ್ನೇಹಿತರ ಜೊತೆ ಪಾರ್ಟಿ ಮಾಡಲು ಬಂದಿದ್ದ ಯುವಕನನ್ನು ಮದ್ಯದ ಅಮಲಿನಲ್ಲಿ ಬಾಟಲ್‍ನಿಂದ ಹೊಡೆದು ಕಲ್ಲಿನಿಂದ ಜಜ್ಜಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಕೊಲೆಯಾದ ಜಾಗದಲ್ಲಿ ಕೆಎ- 51-ಎಚ್‍ಎಫ್-9207 ಹೋಂಡಾ ಡಿಯೋ ಸ್ಕೂಟರ್ ಪತ್ತೆಯಾಗಿದ್ದು, ಇಂದು ಮುಂಜಾನೆ ರಸ್ತೆಯಲ್ಲಿ ಓಡಾಡುವಾಗ ಕೊಲೆಯಾಗಿರುವುದನ್ನು ಸ್ಥಳೀಯರು ನೋಡಿ ಪೆÇಲೀಸರಿಗೆ ಮಾಹಿತಿ ತಿಳಿಸಿದ್ದಾರೆ.
ತಕ್ಷಣ ಸ್ಥಳಕ್ಕೆ ಧಾವಿಸಿದ ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮುಖಂಡನ ಮೇಲೆ ಹಲ್ಲೆ
ಕಳೆದ ಶುಕ್ರವಾರ ರಾತ್ರಿ ನಾಗವಾರದ ಬಳಿ ಕಾಂಗ್ರೆಸ್ ವಿದ್ಯಾರ್ಥಿ ಘಟಕದ ಎನ್‍ಎಸ್‍ಯುಐ ಪ್ರಧಾನ ಕಾರ್ಯದರ್ಶಿ ಮೇಲೆ ಲಾಂಗು ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಮೂವರು ದುಷ್ಕರ್ಮಿಗಳಿಗಾಗಿ ಕಾಡುಗೊಂಡನಹಳ್ಳಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.
ಕಳೆದ ಶುಕ್ರವಾರ ರಾತ್ರಿ 10ರ ವೇಳೆ ನಾಗವಾರ ಬಳಿ ಮೂವರು ದುಷ್ಕರ್ಮಿಗಳು ಮಚ್ಚು ಲಾಂಗ್‍ನಿಂದ ನಡೆಸಿದ ಹಲ್ಲೆಯಿಂದ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯಗೊಂಡಿರುವ ಎನ್‍ಎಸ್‍ಯುಐ ಪ್ರಧಾನ ಕಾರ್ಯದರ್ಶಿ ರಾಜೇಶ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಹಲ್ಲೆ ನಡೆಸಿರುವ ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಹಲ್ಲೆ ನಡೆಸಿ ಪರಾರಿಯಾಗಿರುವ ಮೂವರಿಗಾಗಿ ಕೆ.ಜಿ.ಹಳ್ಳಿ ಪೊಲೀಸರು ತೀವ್ರ ಶೋಧ ನಡೆಸಲಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
