ಶಿರಾ
ಜಮೀನಿನಲ್ಲಿ ಉಳುಮೆಯ ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ಮರಳುತ್ತಿದ್ದಾಗ ಟ್ರ್ಯಾಕ್ಟರ್‍ವೊಂದು ಮಗುಚಿ ಬಿದ್ದ ಪರಿಣಾಮ ಚಾಲಕ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.
ತಾಲ್ಲೂಕಿನ ಚೆನ್ನನಕುಂಟೆಯ ಲಕ್ಷ್ಮೀಶ್ ಎಂಬ ಯುವಕ ತಮ್ಮ ಹೊಲದಲ್ಲಿ ಉಳುಮೆಯ ಕೆಲಸ ಮುಗಿಸಿಕೊಂಡು ರಾತ್ರಿ 9 ಗಂಟೆಯ ಸಮಯದಲ್ಲಿ ಗ್ರಾಮಕ್ಕೆ ಮರಳುತ್ತಿದ್ದಾಗ ಟ್ರ್ಯಾಕ್ಟರ್ ಮಗುಚಿ ಬಿದ್ದ ಪರಿಣಾಮ ಲಕ್ಷ್ಮೀಶ್‍ಗೆ ತೀವ್ರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮೀಶ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
