ಬೆಂಗಳೂರು
ಕ್ಯಾಂಟರ್ ಹಾಗೂ ಕಂಟೇನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ದುರ್ಘಟನೆ ಇಂದು ಮುಂಜಾನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ನಡೆದಿದೆ.
ತಮಿಳುನಾಡು ಮೂಲದ ದಿನೇಶ್ ಕುಮಾರ್ (19)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.ಗಾಯಗೊಂಡು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾಮಾಕ್ಷಿಪಾಳ್ಯದ ನೈಸ್ ರಸ್ತೆಯ ರಾಮಸಂದ್ರ ಬಡಾವಣೆ ಬಳಿ ಮುಂಜಾನೆ 4.30ರ ವೇಳೆ ಕಂಟೇನರ್ ಲಾರಿ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕ್ಯಾಂಟರ್‍ನಲ್ಲಿದ್ದ ದಿನೇಶ್ ಕುಮಾರ್ ಸ್ಥಳದಲ್ಲೇ ಮೃತಪಟ್ಟರೆ, ರಾಜ್ ಕುಮಾರ್ ಗಾಯಗೊಂಡರು. ಪ್ರಕರಣ ದಾಖಲಿಸಿರುವ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸೌಮ್ಯಲತಾ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
