ನವದೆಹಲಿ
ಮೊದಲ ಹಂತದ ಲೋಕಸಭಾ ಚುನಾವಣೆಗೆ ಇನ್ನು 4 ದಿನ ಬಾಕಿ ಉಳಿದಿದ್ದು, ವಿವಿಧ ರಾಜಕೀಯ ಪಕ್ಷಗಳು ಪ್ರಚಾರವನ್ನು ಬಿರುಸುಗೊಳಿಸಿವೆ. ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಾಡಿದ್ದು, ಮಂಗಳವಾರ ತೆರೆ ಬೀಳಲಿದೆ.
ಈ ಹಂತದಲ್ಲಿ 20 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 91 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್ ಹಾಗೂ ಲಕ್ಷದ್ವೀಪ, ತೆಲಂಗಾಣ ಮತ್ತು ಉತ್ತರಾಖಂಡ್ ಸೇರಿವೆ. ಪಶ್ಚಿಮ ಬಂಗಾಳದ ಕೂಚ್ ಬಿಹಾರ್‍ನಲ್ಲಿ ಬಿಜೆಪಿ ಹಿರಿಯ ನಾಯಕ ನರೇಂದ್ರ ಮೋದಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದರು.
ತ್ರಿಪುರಾದ ಗೋಮತಿ ಜಿಲ್ಲೆಯ ಉದಯ್‍ಪುರ್ ಹಾಗೂ ಮಣಿಪುರ್‍ನಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಭುವನೇಶ್ವರದಲ್ಲಿಂದು ನೂತನ ಒಡಿಶಾ ಸಂಕಲ್ಪ ಯಾತ್ರೆಗೆ ಬಿಜೆಪಿ ವರಿಷ್ಠ ಅಮಿತ್ ಷಾ ಚಾಲನೆ ನೀಡಲಿದ್ದಾರೆ.
ನಂತರ ಅವರು ರಾಜ್ಯದ ಬೆಳಗಾಂನಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ಮಹಾರಾಷ್ಟ್ರದ ಗಡ್‍ಚಿರೋಲಿ ಮತ್ತು ಚಂದ್ರಾಪುರದಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಸಹರಾನ್‍ಪುರ, ಶಾಮ್ಲಿ ಮತ್ತು ಬಿಜ್ನೋರ್‍ನಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
