ಬಳ್ಳಾರಿ
ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ವಿವಿಧ ಇಲಾಖೆಗ ಕಟ್ಟಡಗಳ ಪರಿಶೀಲನೆ ಶನಿವಾರ ನಡೆಸಿದರು.
ಭೂದಾಖಲೆಗಳ ಇಲಾಖೆಯ ಉಪನಿರ್ದೇಶಕರ ಕಟ್ಟಡ, ಸಹಾಯಕ ನಿರ್ದೇಶಕರ ಕಟ್ಟಡ, ಸ್ಪಂದನ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಟ್ಟಡ ಸೇರಿದಂತೆ ವಿವಿಧ ಕಟ್ಟಡಗಳನ್ನು ಡಿಸಿ ರಾಮ್ ಪ್ರಸಾತ್ ಅವರು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಗಾಂಧಿಭವನದ ನಿರ್ಮಾಣದ ಕಾಮಗಾರಿಯನ್ನು ಪರಿಶೀಲಿಸಿ, ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದರು.
ಗಾಂಧಿ ಭವನದ ಎದುರುಗಡೆ ಇರುವ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಕಚೇರಿ ಹಾಗೂ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಕಟ್ಟಡಗಳನ್ನು ಕೂಡಲೇ ಡೆಮಾಲಿಶ್ ಮಾಡಿ ಭವನದ ಸೌಂದರೀಕರಣಕ್ಕೆ ಆದ್ಯತೆ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಸ್ಪಂದನ ಕಚೇರಿಯಲ್ಲಿ ಖಾಲಿ ಇರುವ ಕೊಠಡಿಗಳನ್ನು ಒದಗಿಸಿ ಎಂದು ಅಪರ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಇನ್ನೂ ಕೆಲ ಕಚೇರಿಗಳಿಗೆ ಕೊಠಡಿಗಳ ಕೊರತೆ ಇದ್ದು,ಅವುಗಳ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಡಿಪಿಎಆರ್ ರೂಪಿಸಿ ನೀಡಿ,ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಅಪರ ಜಿಲ್ಲಾಧಿಕಾರಿ ಸತೀಶಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.