ತುಮಕೂರು:
ರಾಜ್ಯದ ತಾಲ್ಲೂಕಿನಲ್ಲಿರುವ, ತಾಲ್ಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಸುಗಮ ಕಾರ್ಯನಿರ್ವಹಣೆಗೆ ಕಷ್ಟಕರವಾಗಿದ್ದು, ಕೋವಿಡ್ 19 ಸೋಂಕು ನಿಯಂತ್ರಣ ಕಾರ್ಯದ ಹಾಗೂ ಆರೋಗ್ಯ ಇಲಾಖೆಯ ಇತರೆ ಕಾರ್ಯಕ್ರಮಗಳ ಬಗ್ಗೆ ದಾಖಲಾತಿ ಕೆಲಸಗಳನ್ನು ನಿರ್ವಹಿಸಲು ಸಿಬ್ಬಂದಿ ಕೊರತೆ ಇದ್ದು, ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ಗ್ರಾ.ಪಂ. ಡಾಟಾ ಎಂಟ್ರಿ ಆಪರೇಟರ್‍ಗಳನ್ನು ಆಯಾಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರತಿದಿನ ಒಂದು ಗಂಟೆ ಕೆಲಸ ನಿರ್ವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರು ಜಿ.ಪಂ. ಸಿಇಓ ಸೇರಿದಂತೆ ಎಲ್ಲಾ ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.
ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಳಗಳಲ್ಲಿ, ಗ್ರಾಮ ಪಂಚಾಯತಿ ಇಲ್ಲದಿದ್ದಲ್ಲಿ, ಪಕ್ಕದ ಗ್ರಾಮ ಪಂಚಾಯತಿಯಿಂದ ಡಾಟಾ ಎಂಟ್ರಿ ಆಪರೇಟರ್‍ಗಳನ್ನು ಕಳುಹಿಸಲು ವ್ಯವಸ್ಥೆ ಮಾಡುವುದು. ಈ ಬಗ್ಗೆ ಯಾವ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಯಾವ ಗ್ರಾಮ ಪಂಚಾಯತಿ ಡಾಟಾ ಎಂಟ್ರಿ ಆಪರೇಟರ್ ಕೆಲಸ ನಿರ್ವಹಿಸಬೇಕೆಂಬ ಬಗ್ಗೆ ಜಿಲ್ಲೆಯ ಜಿಲ್ಲಾ ಪಂಚಾಯತಿ ಸಿಇಓ ಅವರು ಅಧಿಕಾರಿಗಳಿಗೆ ತಕ್ಷಣ ಆದೇಶ ನೀಡುವಂತೆಯೂ ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
