ಬಿಜೆಪಿ ಅಭ್ಯರ್ಥಿಯು 1 ಲಕ್ಷ ಮತಗಳಿಂದ ಜಯ ಸಾಧಿಸಲಿದ್ದಾರೆ : ಮಾ. ನಾಗರಾಜ

ಹಾವೆರಿ :

      ಈ ಲೋಕಸಭಾ ಚುನಾವಣೆಯಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿಯು 1 ಲಕ್ಷ ಮತಗಳಿಂದ ಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಮಾ. ನಾಗರಾಜ ಹೇಳಿದರು. ನಗರದಲ್ಲಿ ಜರುಗಿದ ಮತ ಎಣಿಕೆ ಏಜೆಂಟರ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು ದಿ,23 ರಂದು ಮತ ಎಣಿಕೆ ಕಾರ್ಯದಲ್ಲಿ ನಮ್ಮ ಮತ ಏಣಿಕೆ ಏಜೆಂಟರಗಳು ಸರಿಯಾದ ಸಮಯಕ್ಕೆ ಹಾಜರಿದ್ದು, ಮತ ಎಣಿಕೆ ಕಾರ್ಯವನ್ನು ಜಾಗೃತೆಯಿಂದ ನಿರ್ವಹಿಸಬೇಕು. ಚುನಾವಣೆಯಲ್ಲಿ ಪ್ರತಿಯೊಂದು ಮತವು ಪ್ರಾಮುಖ್ಯತೆ ಪಡೆದಿರುತ್ತದೆ. ಮತ ಏಜೆಂಟರಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದುರು.

       ಸಂಸದರಾದ ಶಿವರಕುಮಾರ ಉದಾಸಿ ಮಾತನಾಡಿ ಈ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 300 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣೆಯನ್ನು ಹಿಡೆಯಲಿದೆ.ಮತ ಎಣಿಕೆ ದಿನದಂದು ನಾವೆಲ್ಲರು ಜಾಗೃತೆಯಿಂದ ಕಾರ್ಯನಿರ್ವಹಿಸಬೇಕು ಎಂದರು. ಈ ಸಂದರ್ಭದಲ್ಲಿ ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಜಿಲ್ಲಾಧ್ಯಕ್ಷರಾದ ಶಿವರಾಜ ಸಜ್ಜನರ. ಸಿದ್ದರಾಜ ಕಲಕೋಟಿ, ಮಂಜುನಾಥ ಓಲೇಕಾರ, ಸುರೇಶಗೌಡ ಪಾಟೀಲ ಮುಖಂಡರು ಹಾಗೂ ಕಾರ್ಯಕರ್ತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link