ಕೊರಟಗೆರೆ
ರಾಜ್ಯದ 8ಲಕ್ಷ 50ಸಾವಿರ ವಿದ್ಯಾರ್ಥಿಗಳು ಸುಸಜ್ಜಿತವಾದ ಸುರಕ್ಷಿತ ಪರೀಕ್ಷಾ ಕೇಂದ್ರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪಾಲ್ಗೊಳ್ಳವ ಮೂಲಕ ರಾಷ್ಟ್ರಕ್ಕೆ ನಮ್ಮ ರಾಜ್ಯ ಶಿಕ್ಷಣ ಇಲಾಖೆಯಲ್ಲಿ ಮಾದರಿಯಾಗಿದೆ ಎಂದು ರಾಜ್ಯ ಸರಕಾರದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ್ ಹೇಳಿದರು.
ಪಟ್ಟಣದ ಬಾಲಕಿಯರ ಪ್ರೌಢಶಾಲೆ, ಕಾಳಿದಾಸ ಮತ್ತು ಪದವಿಪೂರ್ವ ಕಾಲೇಜು ಕೇಂದ್ರಗಳಿಗೆ ಬೇಟಿ ನೀಡಿ ಆರೋಗ್ಯ ತಪಾಸಣೆ, ಭದ್ರತೆ, ಕೊಠಡಿ ಸ್ವಚ್ಚತೆ ಮತ್ತು ವಿದ್ಯಾರ್ಥಿಗಳ ಸಾಮಾಜಿಕ ಅಂತರದ ಬಗ್ಗೆ ಗುರುವಾರ ಪರಿಶೀಲನೆ ನಡೆಸಿದ ನಂತರ ಮಾತನಾಡಿದರು.
ಶಿಕ್ಷಣ ಇಲಾಖೆಯಿಂದ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ತುಮಕೂರು ನಗರ ಮತ್ತು ಕೊರಟಗೆರೆ ಪರೀಕ್ಷಾ ಕೇಂದ್ರದಲ್ಲಿ ಶಿಕ್ಷಣ ಇಲಾಖೆಯ ಮಾರ್ಗಸೂಚಿ ಪಾಲನೆ ಮಾಡಲಾಗಿದೆ. ಸಿದ್ದಗಂಗಾ ಮಠದಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ಲವಲವಿಕೆ ಮತ್ತು ಶಿಸ್ತು ರಾಜ್ಯದ ಹಿರಿಯರಿಗೆ ಮಾದರಿ ಆಗಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಜೂ.25ರಿಂದ ಪ್ರಾರಂಭವಾದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜೂ.3ರಂದು ಮುಕ್ತಾಯ ಆಗಲಿದೆ. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಹಾಜರಾತಿ ಶೇ.98ರಷ್ಟು ಕಂಡುಬಂದಿದೆ. ಪೊಲೀಸ್, ಸಾರಿಗೆ, ಆರೋಗ್ಯ, ಕಂದಾಯ, ಶಿಕ್ಷಣ ಇಲಾಖೆಯ ಹಗಲುರಾತ್ರಿ ಸೇವೆಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸುಗಮವಾಗಿ ನಡೆದಿದೆ ಎಂದು ತಿಳಿಸಿದರು.
ಕೊರಟಗೆರೆ ಪಟ್ಟಣದ ಬಾಲಕಿಯರ ಪ್ರೌಢಶಾಲೆ, ಕಾಳಿದಾಸ ಪ್ರೌಢಶಾಲೆ ಮತ್ತು ಸರಕಾರಿ ಪ್ರೌಢಶಾಲೆಗೆ ಬೇಟಿ ನೀಡಿದ ಶಿಕ್ಷಣ ಸಚಿವ ಸುರೇಶಕುಮಾರ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಕೊಠಡಿ ಮತ್ತು ಸಾಮಾಜಿಕ ಅಂತರವನ್ನು ವಿಕ್ಷಣೆ ಮಾಡಿದ ನಂತರ ಆರೋಗ್ಯಕ್ಕಾಗಿ ಕೈಗೊಂಡಿರುವ ಮಾಸ್ಕ್ ಮತ್ತು ಸ್ಯಾನಿಟೈಸರ್ ವ್ಯವಸ್ಥೆಯನ್ನು ಪರೀಶಿಲನೆ ನಡೆಸಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪ್ರಶಂಸೆ ವ್ಯಕ್ತಪಡಿಸಿದ ಘಟನೆ ನಡೆಯಿತು.
ಪರೀಶಿಲನೆ ವೇಳೆಯಲ್ಲಿ ಎಂಎಲ್‍ಸಿ ವೈ.ಎ.ನಾರಾಯಣಸ್ವಾಮಿ, ಮಧುಗಿರಿ ಡಿಡಿಪಿಐ ರೇವಣ್ಣಸಿದ್ದಪ್ಪ, ಡಿವೈಪಿಸಿ ರಾಜಕುಮಾರ, ಕೊರಟಗೆರೆ ತಹಶೀಲ್ದಾರ್ ಗೋವಿಂದರಾಜು, ಬಿಇಓ ಗಂಗಾಧರ್, ಸಿಪಿಐ ನದಾಫ್, ಪಿಎಸೈ ಮುತ್ತುರಾಜು, ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕಿ ಉನ್ನಿಸಾ ಸೇರಿದಂತೆ ಇತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
