ಕಾಂಗ್ರೆಸ್ ಶಾಸಕರನ್ನು ಸಮರ್ಥಿಸಿಕೊಂಡ ಪರಮ್

ಬೆಂಗಳೂರು

        ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರು.ಈ ಹಿಂದೆ ಮುಖ್ಯಮಂತ್ರಿಗಳಾಗಿ ಸಾಕಷ್ಟು ಜನಪರ,ಹಾಗೂ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಹಾಗಾಗಿ ಅವರ ಮೇಲಿನ ಅಭಿಮಾನದಿಂದ ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಎಂದು ಕರೆಯುತ್ತಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದು ಉಪ ಮುಖ್ಯಮಂತ್ರಿ ಡಾ.ಪರಮೇಶ್ವರ್ ಶಾಸಕರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

         ಮಂತ್ರಿಸ್ಕ್ವೈರ್ ಬಳಿ ಮೆಟ್ರೋ ರೈಲಿನ 6 ಬೋಗಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರಕ್ಕೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ, ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂಬ ಭಾವನೆಯಿದೆ. ಆದರೆ ಈ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸುವುದು ಸರಿಯಲ್ಲ ಎಂದರು.

        ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 8000 ಕೋಟಿ ಅನುದಾನ ನೀಡಿ ಬೆಂಗಳೂರು ಅಭಿವೃದ್ಧಿಗೆ ಆದ್ಯತೆ ನೀಡಲಾಗಿತ್ತು. ಅದನ್ನು ಮೈತ್ರಿ ಸರ್ಕಾರದ ಮುಂದುವರೆಸಲಿ ಎಂದರು. ಶಾಸಕಾಂಗ ನಾಯಕರಾಗಿ ಪಕ್ಷವನ್ನು ಸಮರ್ಥವಾಗಿ ಸಿದ್ದರಾಮಯ್ಯ ನಿಭಾಯಿಸುತ್ತಿದ್ದಾರೆ ಎಂದು ಪರಮೇಶ್ವರ್ ಹೊಗಳಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap