ಫೆ.10 ಛಲವಾದಿ ಮಹಾಸಭಾದಿಂದ ಪರಮೇಶ್ವರ್ ಗೆ ಸನ್ಮಾನ

ಜಗಳೂರು:

      ದಾವಣಗೆರೆಯ ಶಿವಯೋಗಿ ಮಂದಿರಲ್ಲಿ ಫೆ. 10ರಂದು ಜಿಲ್ಲಾ ಛಲವಾದಿ ಮಹಾಸಭಾದಿಂದ ನಡೆಯಲಿರುವ ಅಭಿನಂದನಾ ಹಾಗೂ ಜನ ಜಾಗೃತಿ ಸಮಾರಂಭ ನಡೆಯಲಿದೆ ಎಂದು ಛಲವಾದಿ ಸಂಘದ ತಾಲೂಕು ಗೌರವಾಧ್ಯಕ್ಷ ಸಿ. ಲಕ್ಷ್ಮಣ್ ಹೇಳಿದರು.

        ಪಟ್ಟಣದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಒನಕೆ ಓಬವ್ವ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕು ಎಂದು ದಾವಣಗೆರೆಯಲ್ಲಿ ನಡೆಯುವ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಲಾಗುವುದು.

       ರಾಜ್ಯದಲ್ಲಿ ಹೆಚ್ಚು ಜನ ಸಂಖ್ಯೆ ಹೊಂದಿರುವ ಛಲವಾದಿ ಸಮಾಜ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯವಾಗಿದ್ದು, ಅಭಿವೃದ್ದಿಗೆ ಸಂಘಟನೆ ಮಾಡಬೇಕು ಎಂದರು. ಎಲ್ಲಾ ಸಮಾಜದಲ್ಲೂ ವಿವಿಧ ಜಯಂತಿಗಳನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಮಾಡಲಾಗಿದೆ. ಛಲವಾದಿ ಸಮಾಜದಿಂದ ಒನಕೆ ಓಬವ್ವ ಜಯಂತಿ ಆಚರಣೆಗೆ ರಾಜ್ಯ ನಾಯಕರು ಸರ್ಕಾರದಲ್ಲಿ ಚರ್ಚಿಸಿ ಜಾರಿಗೆ ತರಲು ಶ್ರಮಿಸಬೇಕು ಇದೇ ಸಂದರ್ಭದಲ್ಲಿ ಅವರು ಒತ್ತಾಯಿಸಿದರು.

        ತಾಲೂಕಾಧ್ಯಕ್ಷ ನಿಜಲಿಂಗಪ್ಪ ಮಾತನಾಡಿ, ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ತಾಲೂಕಿನಿಂದ ಹೆಚ್ಚು ಜನರನ್ನು ಕರೆದುಕೊಂಡು ಹೋಗಲಾಗುವುದು, ತಾಲೂಕಿನ ಬಂಧುಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಈ ಸಂಧರ್ಭದಲ್ಲಿ ಮುಖಂಡರಾದ ತಿಪ್ಪೇಸ್ವಾಮಿ, ನಾಗಲಿಂಗಪ್ಪ, ಕೆ.ಟಿ ವೀರಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link