ಪರಿಶಿಷ್ಟರ ಆಯೋಗಕ್ಕೆ ಅಧ್ಯಕ್ಷರ ನೇಮಕಕ್ಕೆ ಆಗ್ರಹ

ದಾವಣಗೆರೆ:

     ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ತಕ್ಷಣವೇ ಅಧ್ಯಕ್ಷರನ್ನು ನೇಮಿಸಬೇಕೆಂದು ಒತ್ತಾಯಿಸಿ ದಾವಣಗೆರೆ ಜಿಲ್ಲಾ ಎಸ್ಸಿ, ಎಸ್ಟಿ ಹಕ್ಕುಗಳ ಹೋರಾಟ ಸಮಿತಿ ಪದಾಧಿಕಾರಿಗಳು ನಗರದಲ್ಲಿ ಗುರುವಾರ ಪ್ರತಿಭಟನೆ ನಡಸಿದರು.

     ನಗರದ ಅಶೋಕ ರಸ್ತೆಯಲ್ಲಿರುವ ಕಾಮ್ರೇಡ್ ಪಂಪಾಪತಿ ಭವನದಿಂದ ಪ್ರತಿಭಟನಾ ಮೆರವಣಿಗೆ ಹೊರಟ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡದ ಮೈತ್ರಿ ಸರ್ಕಾರದ ತಾತ್ಸಾರ ಮನೋಭಾವವನ್ನು ಖಂಡಿಸಿ ಘೋಷಣೆ ಕೂಗುತ್ತಾ, ಎಸಿ ಕಚೇರಿಗೆ ತೆರಳಿ ಉಪ ವಿಭಾಗಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನನಿ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಧ್ವನಿ ಇಲ್ಲದವರ ಮೇಲೆ ನಡೆಯುವ, ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ಸಂಕಷ್ಟಗಳನ್ನು ಆಲಿಸಲು 2003ರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಆಯೋಗವನ್ನು ರಚಿಸಿತ್ತು. ಆದರೆ, ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಆಯೋಗಕ್ಕೆ ಅಧ್ಯಕ್ಷರ ನೇಮಿಸಿಲ್ಲ. ಹೀಗಾಗಿ ಪರಿಶಿಷ್ಟರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡುವವರೆ ಇಲ್ಲವಾಗಿದೆ ಎಂದು ಆರೋಪಿಸಿದರು.

      ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಯೋಗದಲ್ಲಿ 2,752 ಪ್ರಕರಣಗಳ ವಿಚಾರಣೆ ಬಾಕಿ ಇದ್ದು, ಈಗಿರುವ ಕಾರ್ಯದರ್ಶಿಗೆ ಆರೋಪಿಗಳಿಗೆ ಸಮನ್ಸ್ ನೀಡಿ ವಿಚಾರಣೆ ನಡೆಸುವ ಅಧಿಕಾರ ಇಲ್ಲ. ರಾಜ್ಯದಲ್ಲಿ ನಡೆದ ದಲಿತ ಮೇಲಿನ ದೌರ್ಜನ್ಯ ಪ್ರಕರಣಗಳ ಆರೋಪಿಗಳಿಗೆ ಶಿಸ್ತು ಕ್ರಮ ಜರುಗಿಸುವ ಅಧ್ಯಕ್ಷರು ಆಯೋಗಕ್ಕೆ ಇಲ್ಲ. ಹೀಗಾಗಿ ಆಯೋಗ ಇದ್ದು ಸತ್ತಾಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

      ಸದ್ಯ ಆಯೋಗಕ್ಕೆ ಕಳೆದ ಒಂದು ವರ್ಷದಿಂದ ಅಧ್ಯಕ್ಷರು ನೇಮಕವಾಗದ ಕಾರಣ ಇಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿಗೆ ವೇತನ ನೀಡುವುದಕ್ಕೆ ಮಾತ್ರ ಸೀಮಿತವಾಗಿದೆ. ಆಯೋಗಕ್ಕೆ ಬಲ ತುಂಬುವ ಕೆಲಸವನ್ನು ಮುಖ್ಯಮಂತ್ರಿ ಮಾಡಬೇಕಿತ್ತು. ರಾಜ್ಯಮಟ್ಟದ ಜಾಗೃತ, ಉಸ್ತುವಾರಿ ಸಮಿತಿ ಸಭೆ ನಡೆಸುವ ಕಾಳಜಿ ತೋರುತ್ತಿಲ್ಲ ಎಂದು ದೂರಿದರು.ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಆಯೋಗ ರಚಿಸಲಾಗಿದೆ.

       ಇದು ವರ್ಷಕ್ಕೆ 4 ಸಭೆ ನಡೆಸಬೇಕು. ಆದರೆ, ಸಮಿತಿ ಅಧ್ಯಕ್ಷರಾದ ಮುಖ್ಯಮಂತ್ರಿ ಸಭೆ ನಡೆಸಿಲ್ಲ. 14 ಜಿಲ್ಲೆಗಳಲ್ಲಿ ಒಂದೇ ಒಂದು ಸಭೆಯೂ ನಡೆಸಿಲ್ಲ. ಇದರಿಂದ ಜಿಲ್ಲಾಧಿಕಾರಿಗಳಲ್ಲೂ ತಾತ್ವಾರ ಮೂಡಿದೆ. ಆದ್ದರಿಂದ ತಕ್ಷಣವೇ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

     ಪ್ರತಿಭಟನೆಯಲ್ಲಿ ಸಮಿತಿ ಜಿಲ್ಲಾಧ್ಯಕ್ಷ ಆವರಗೆರೆ ವಾಸು, ಮುಖಂಡರಾದ ವಿ.ಲಕ್ಷ ್ಮಣ, ರಾಜು ಕೆರೆನಹಳ್ಳಿ, ಸಿ.ಗುರುಮೂರ್ತಿ, ತಿಪ್ಪೇಶ್ ಹೊನ್ನೂರು, ಡಿ.ಮಂಜು, ಜಿ.ಕರಿಬಸಪ್ಪ, ಹನುಮಂತಪ್ಪ ಕಂಚಿಕೆರೆ, ಟಿ.ಕೆಲಕ್ಷ ್ಮಣ್ ನಾಯ್ಕ್, ಪರಶುರಾಮ ಗೊಲ್ಲರಹಳ್ಳಿ ಮತ್ತಿತರರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap