ದೇಶದ ಸ್ವಾತಂತ್ರ್ಯಕ್ಕಾಗಿ ಬಿಜೆಪಿ, ಆರ್‍ಎಸ್‍ಎಸ್‍ನ ಕೊಡುಗೆ ಶೂನ್ಯ : ಖರ್ಗೆ

ಹೊಸಪೇಟೆ :

      ದೇಶದ ಸ್ವಾತಂತ್ರ್ಯಕ್ಕಾಗಿ ಬಿಜೆಪಿ ಹಾಗು ಆರ್‍ಎಸ್‍ಎಸ್‍ನ ಯಾರೊಬ್ಬರೂ ತ್ಯಾಗ ಮಾಡಿಲ್ಲ. ದೇಶಕ್ಕಾಗಿ ಅವರ ಕೊಡುಗೆ ಶೂನ್ಯ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಪಕ್ಷವೆಂದರೆ ಅದು ಕಾಂಗ್ರೆಸ್ ಮಾತ್ರ ಎಂದುಲೋಕಸಭೆ ಕಾಂಗ್ರೆಸ್ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

      ತಾಲೂಕಿನ ಕಮಲಾಪುರ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ಸೋಮವಾರ ಆಯೋಜಿಸಿದ್ದ ಕಾಂಗ್ರೆಸ್ ಮತದಾರರ ಸಮಾವೇಶದಲ್ಲಿ ಮಾತನಾಡಿದ ಅವರು,

       ದೇಶದ ಅಭಿವೃದ್ದಿಗೆ ಕಾಂಗ್ರೆಸ್ ಅವಿರತ ಶ್ರಮಿಸಿದೆ. 70 ವರ್ಷಗಳ ಹಿಂದೆ ನಿರ್ಮಾಣವಾದ ಡ್ಯಾಂಗಳು, ರಸ್ತೆಗಳು, ಬೃಹತ್ ಕೈಗಾರಿಕೆಗಳು, ದೇಶದ ವಿಜ್ಷಾನ ತಂತ್ರಜ್ಞಾನ, ಬ್ಯಾಂಕಿಂಗ್ ರಾಷ್ಟ್ರೀಕರಣ, ಶಿಕ್ಷಣ ಹಾಗು ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅದ್ಭುತ ಸಾಧನೆ ಮಾಡಿದೆ. ಇಂಥ ಒಂದೇ ಒಂದು ಕೆಲಸ ಪ್ರಧಾನಿ ಮೋದಿ ಮಾಡಿದ್ದಾರಾ ? ಎಂದು ಪ್ರಶ್ನಿಸಿದರು.

       ದೇಶದ ಯುವಕರಿಗೆ ಉದ್ಯೋಗ ನೀಡುತ್ತಿಲ್ಲ, ರೈತರ ಸಾಲಮನ್ನಾ ಮಾಡುತ್ತಿಲ್ಲ. ದೇಶದಲ್ಲಿ ಕೋಮುವಾದಿಗಳು ಬಂದು ಭಯದ ವಾತಾವರಣ ಸೃಷ್ಟಿಯಾಗಿದೆ. ಪ್ರಧಾನಿ ಸಂಸತ್ತಿನಲ್ಲಿ ಯಾವುದೇ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ. ಬದಲಿಗೆ ಹೊರಗೆ ಬಂದು ಪ್ರಚಾರಕ್ಕೆ ಮಾತ್ರ ಸೀಮಿತವಾಗಿದ್ದಾರೆ ಎಂದು ಟೀಕಿಸಿದರು.

      ದೇಶದಲ್ಲಿ ಸಂವಿಧಾನ, ಪ್ರಜಾಪ್ರಭುತ್ವವನ್ನು ಗಂಡಾಂತರ ಸ್ಥಿತಿಯಲ್ಲಿದೆ. ಇದನ್ನು ಬುಡಮೇಲು ಮಾಡಲು ಹೊರಟಿರುವ ಕೇಂದ್ರದ ಬಿಜೆಪಿ ಸರ್ಕಾರವನ್ನು ಜನ ಕಿತ್ತೊಗೆದು, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದರು.

      ಲೋಕಸಭೆಯಲ್ಲಿ ರಾಜ್ಯದ ಪರ ಮಾತನಾಡಲು ಉಗ್ರಪ್ಪ ಸೂಕ್ತವಾದ ವ್ಯಕ್ತಿ. ಅವರು ಒಬ್ಬ ಕಾನೂನು ತಜ್ಞರಾಗಿದ್ದಾರೆ. ಈ ಭಾಗದ ಸಮಸ್ಯೆಗಳಿಗೆ ಧ್ವನಿ ಎತ್ತಬೇಕಾದರೆ ಉಗ್ರಪ್ಪರನ್ನು ಗೆಲ್ಲಿಸಬೇಕು. ಅಖಂಡ ದೇಶ ಒಟ್ಟಾಗಿರಬೇಕು ಎಂದು ನಾವು ಬಯಸುತ್ತೇವೆ. ಆದರೆ ಬಿಜೆಪಿ ಜಾತಿ, ಧರ್ಮಗಳಿಂದ ಜನರನ್ನು ಬೇರೆ ಬೇರೆ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಜಯನಗರ ಜಿಲ್ಲೆ ನನ್ನ ಗುರಿ : ಶಾಸಕ ಆನಂದಸಿಂಗ್ ಮಾತನಾಡಿ, ನನಗೆ ಯಾವುದೇ ಸಚಿವ ಸ್ಥಾನದ ಆಸೆ ಇಲ್ಲ. ನನ್ನ ಗುರಿ ಒಂದೇ. ಅದು ವಿಜಯನಗರ ಜಿಲ್ಲೆಯಾಗಿ ರಚನೆಯಾಗಬೇಕು. ಈ ನಿಟ್ಟಿನಲ್ಲಿ ನಾನು ಚುನಾವಣೆ ಬಳಿಕ ಹಂಪಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮೂಲಕ ತೆರಳಿ, ಮುಖ್ಯಮಂತ್ರಿ ಕುಮಾರಸ್ವಾಮಿಗೆ ವಿಜಯನಗರವನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಮನವಿ ಸಲ್ಲಿಸುತ್ತೇನೆ. ಅಂದೇ ವಿಜಯನಗರ ಜಿಲ್ಲೆಯಾಗಿ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅನಗತ್ಯ ಚುನಾವಣೆಗೆ ಕಾರಣರಾದ ಬಿಜೆಪಿಯ ಶ್ರೀರಾಮುಲು ಯಾವುದೇ ಅಭಿವೃದ್ದಿ ಕೆಲಸ ಮಾಡಿಲ್ಲ. ಹೀಗಾಗಿ ನವೆಂಬರ್ 3ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಇವರನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಉಗ್ರಪ್ಪರನ್ನು ಬಹುಮತದಿಂದ ಗೆಲ್ಲಿಸಬೇಕು ಎಂದರು.
ಈ ಸಂಧರ್ಭದಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಶಾಸಕ ಪ್ರತಾಪಗೌಡ ಪಾಟೀಲ, ನಾರಾಯಣ, ಎಂಎಲ್‍ಸಿ ಕೆ.ಸಿ.ಕೊಂಡಯ್ಯ, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ, ಮಾಜಿ ಶಾಸಕ ರತನಸಿಂಗ್, ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ, ಜಿ.ಪಂ.ಸದಸ್ಯ ಪ್ರವೀಣಸಿಂಗ್, ಕಮಲಾಪುರ ಪ.ಪಂ.ಅಧ್ಯಕ್ಷ ಡಾ.ಮಳಲಿ, ಕಮಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಮಾಜಿ ಹೇಮಣ್ಣ, ಧರ್ಮೇಂದ್ರಸಿಂಗ್, ಶಮಿವುಲ್ಲಾ, ಮುಕ್ತಿಯಾರ್ ಪಾಷಾ, ನಿಂಬಗಲ್ ರಾಮಕೃಷ್ಣ, ವಿ.ಸೋಮಪ್ಪ, ಕೆ.ತಿಪ್ಪೇಸ್ವಾಮಿ, ಸೇರಿದಂತೆ ಇನ್ನಿತರರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap