ಉಮೇಶ್ ಕತ್ತಿ ಹೇಳಿಕೆಯಿಂದ ಪಕ್ಷ ಅಪಹಾಸ್ಯಕ್ಕೀಡಾಗಿದೆ:ಎಂಪಿಆರ್

ಬೆಂಗಳೂರು

        ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರ ಪತನ ಕುರಿತು ಅನಗತ್ಯ ಹೇಳಿಕೆಗಳನ್ನು ನೀಡುತ್ತಿರುವ ಹಿರಿಯ ಮುಖಂಡ, ಶಾಸಕ ಉಮೇಶ್ ಕತ್ತಿ ವಿರುದ್ಧ ಇದೀಗ ಸ್ವಪಕ್ಷೀಯರಿಂದಲೇ ಟೀಕೆ ವ್ಯಕ್ತವಾಗಿದ್ದು, ಇದರಿಂದ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ

         ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಮೇಶ್ ಕತ್ತಿ ಅವರು ನೀಡಿದ ಹೇಳಿಕೆಯಿಂದ ಪಕ್ಷ ಜನರ ಮುಂದೆ ಅಪಹಾಸ್ಯಕ್ಕೀಡಾಗುವಂತಾಗಿದೆ. ಇದರಿಂದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿಯ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

         ಪಕ್ಷಕ್ಕೆ ಧಕ್ಕೆಯಾಗುವಂತಹ ಹೇಳಿಕೆಗಳನ್ನು ಯಾರೂ ಸಹ ನೀಡಬಾರದು. ನಾಯಕರಾದವರು ರಾಜಕೀಯವಾಗಿ ಗಾಂಭೀರ್ಯತೆಯಿಂದ ವರ್ತಿಸಬೇಕು. ಕತ್ತಿಯವರಿಗೆ ಬೇರೆ ಪಕ್ಷದ ಮುಖಂಡರು ಪರಿಚಯವಿದ್ದ ಮಾತ್ರಕ್ಕೆ ಅವರು ಮುಜುಗರ ತರುವಂತಹ ಹೇಳಿಕೆ ನೀಡುವುದು ಎಷ್ಟರ ಮಟ್ಟಿಗೆ ಸರಿ. ಬಿಜೆಪಿಯಲ್ಲಿರುವ ಎಲ್ಲಾ ಶಾಸಕರು ಪ್ರತಿಪಕ್ಷವಾಗಿ ಕೆಲಸ ಮಾಡುತ್ತಾರೆಯೇ ಹೊರತು ಯಾರೂ ಸಹ ಆಪರೇಷನ್ ಕಮಲಕ್ಕೆ ಕೈಹಾಕುವುದಿಲ್ಲ ಎಂದು ಹೇಳಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link