ಪಟ್ಟಣ ಪಂಚಾಯ್ತಿಯಲ್ಲೂ ಬಿಜೆಪಿಗೆ ಅಧಿಕಾರ

ಹೊಳಲ್ಕೆರೆ;

   ಹೊಳಲ್ಕೆರೆ ಪಟ್ಟಣ ಪಂಚಾಯಿತಿಗೆ ನಡೆಯಲಿರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಸ್ಪರ್ದಿಸಿರುವ ಅಭ್ಯರ್ಥಿಗಳ ಪರವಾಗಿ ಬಿಜೆಪಿಯ ಯುವ ಮುಖಂಡ ರಘುಚಂದನ್ ಅವರು ಕಳೆದರಡು ದಿನಗಳಿಂದ ಬಿರುಸಿನ ಪ್ರಚಾರ ನಡೆಸಿದರು

     ಪಟ್ಣಣ ಪಂಚಾಯಿತಿಯ ವಿವಿಧ ವಾರ್ಡ್‍ಗಳಲ್ಲಿ ಶನಿವಾರ, ಭಾನುವಾರ ಮತ್ತು ಸೋಮವಾರದಂದು ಸತತವಾಗಿ ಅಭ್ಯರ್ಥಿಗಳ ಪರವಾಗಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಪಟ್ಟಣದ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲಿಸಬೇಕು ಎಂದು ರಘುಚಂದನ್ ಮತದಾರರಲ್ಲಿ ವಿನಂತಿಸಿಕೊಂಡರು

     ಕ್ಷೇತ್ರದ ಶಾಸಕರಾಗಿವ ಎಂ.ಚಂದ್ರಪ್ಪ ಅವರು ಈ ಹಿಂದೆ ಶಾಸಕರಾಗಿದ್ದಾಗ ಪಟ್ಟಣದಲ್ಲಿ ಅನೇಕ ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ. ಪಟ್ಟಣದಲ್ಲಿ ವಾಣಿಜ್ಯ ಮಳಿಗೆ, ಹೈಟಕ್ ಆಸ್ಪತ್ರೆಯೂ ಸೇರಿದಂತೆ ಸುಮಾರು 700ಕ್ಕೂ ಹೆಚ್ಚು ಕೋಟಿ ರೂಪಾಯಿಗಳ ಅನುದಾನ ತಂದು ಅಭಿವೃದ್ದಿಗೆ ಶ್ರಮಿಸಿದ್ದಾರೆ ಎಂದು ಮತದಾರರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದರು

ಬಿಜೆಪಿ ಗೆಲುವು ನಿಶ್ಚಿತ;

      ಇದೇ ಸಂದರ್ಭದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ರಘುಚಂದನ್ ಅವರು, ಈ ಬಾರಿಯ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕ ಸ್ಥಾನಗಳನ್ನು ಪಡೆದು ಅಧಿಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು
ಈ ಚುನಾವಣೆಯಲ್ಲಿ ಬಿಜೆಪಿ 12ಕ್ಕೂ ಹೆಚ್ಚು ವಾರ್ಡ್‍ಗಳಲ್ಲಿ ಗೆಲ್ಲುವ ನಿರೀಕ್ಷೆ ಇದೆ. ಪ್ರತಿವಾರ್ಡ್‍ನಲ್ಲಿಯೂ ಮತದಾರರು ಬಿಜೆಪಿಯ ಕಡೆ ಹೆಚ್ಚು ಒಲವು ತೋರುತ್ತಿರುವುದನ್ನು ಗಮನಿಸಿದ್ದೇನೆ. ಚುನಾವಣಾ ಕಣದಲ್ಲಿರುವ ನಮ್ಮ ಅಭ್ಯರ್ಥಿಗಳ ಬಗ್ಗೆಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು

     ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಭಾತೀಯ ಜನತಾ ಪಾರ್ಟಿಗೆ ಅಭೂತ ಪೂರ್ವ ಗೆಲುವು ಸಿಕ್ಕಿದೆ.ಇಡೀ ದೇಶವೇ ಮೋದಿ ನಾಯಕತ್ವಕ್ಕೆ ಒಪ್ಪಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶದ ಚಿತ್ರಣವೇ ಬದಲಾಗಿದೆ. ಆರ್ಥಿಕ, ಶೈಕ್ಷಣಿಕ, ಕೈಗಾರಿಕೆ, ಮಾಹಿತಿ ತಂತ್ರಜ್ಞಾನವೂ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸಾಕಷ್ಟು ಸುಧಾರಣೆಯಾಗಿದೆ. ಜೊತೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವವೂ ಹೆಚ್ಚಿದೆ ಎಂದು ರಘುಚಂದನ್ ಬಣ್ಣಿಸಿದರು

       ದೇಶದಲ್ಲಿ ಮೋದಿ ಅವರ ಅಲೆಯಂತೆ ಕರ್ನಾಕದಲ್ಲಿ ಯಡಿಯೂರಪ್ಪ ಅವರ ಅಲೆಯೂ ಇದೆ. ರಾಜ್ಯದಲ್ಲಿ ಮತ್ತೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವುದು ಖಚಿತ. ಹೊಳಲ್ಕೆರೆಯಲ್ಲಿ ಶಾಸಕರಾಗಿರುವ ಎಂ.ಚಂದ್ರಪ್ಪ ಅವರ ಅಭಿವೃದ್ದಿ ಬಗೆಗಿನ ಕಾಳಜಿ ಮತ್ತು ಬದ್ದತೆಯಿಂದಾಗಿ ಇಡೀ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳು ಚರುಕುಗೊಂಡಿವೆ. ಮುಂದಿನ ದಿನಗಳಲ್ಲಿಯೂ ಮತ್ತಷ್ಟು ಅಭಿವೃದ್ದಿಗಾಗಿ ಈ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ ಚಂದ್ರಪ್ಪ ಅವರ ಬಲವನ್ನು ಹೆಚ್ಚಿಸಬೇಕೆಂದು ಅವರು ಮನವಿ ಮಾಡಿದರು

      ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಹೇಶ್ವರಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯೆ ಸುಮಾಲಿಂಗರಾಜು, ಮುಖಂಡರಾದ ಲಿಂಗರಾಜು, ಡಾ.ಉಮಾಪತಿ, ಕೇಬಲ್ ಮಹೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಅಂಕಲಪ್ಪ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅಶೋಕ್ ಇನ್ನಿತರರು ಹಾಜರಿದ್ದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link