ರಾಮನಗರ 
ಇ-ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಪಿಡಿಒ ಎಸಿಬಿ ಬಲೆಗೆ.ಬಿಡದಿ ಹೋಬಳಿ ಮಂಚನಾಯ್ಕನಹಳ್ಳಿ ಗ್ರಾಪಂ ಪಿಡಿಒ ಶಾಮಿದ್ ಬಿ ಓಲೇಕಾರ್ ಎಸಿಬಿ ಪೊಲೀಸರು ಬೀಸಿದ ಬಲೆಗೆ ಸಿಕ್ಕಿ ಬಿದ್ದ ಅಧಿಕಾರಿ.ಬಿಡದಿ ಹೋಬಳಿ ಮಂಚನಾಯ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಆಸ್ತಿಯೊಂದರ ಇ ಖಾತೆ ಮಾಡುವ ಸಂಬಂಧ ಆಸ್ತಿ ಮಾಲೀಕರ ಕೆಂಗೇರಿ ಮನೆಯಲ್ಲಿ ಲಂಚದ ಹಣ ಪಡೆಯುವಾಗ ಎಸಿಬಿ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.ಆರೋಪಿ ಅಧಿಕಾರಿಯನ್ನು ರಾಮನಗರದ ಎಸಿಬಿ ಕಚೇರಿಗೆ ಕರೆತರಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








