ಬೆಂಗಳೂರು
ಟ್ರಾಕ್ಟರ್ ಹರಿದು ರಸ್ತೆದಾಟುತ್ತಿದ್ದ ಪ್ರತಿಯೊಬ್ಬರು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.
ದಾಸರಹಳ್ಳಿಯ ನಟರಾಜ್(31)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.ಕುಬ್ಜರಾಗಿದ್ದ ನಟರಾಜ್ ರಸ್ತೆಬದಿ ಹಾಡು ಹೇಳುತ್ತಾ ಭೀಕ್ಷೆ ಜೀವನ ಸಾಗಿಸುತ್ತಿದ್ದರು. ಶನಿವಾರ ಮಧ್ಯಾಹ್ನ 12.30ರ ವೇಳೆ ದಾಸರಹಳ್ಳಿ ಮುಖ್ಯರಸ್ತೆಯಲ್ಲಿ ರಸ್ತೆ ದಾಟುತ್ತಿದ್ದಾಗ ನಟರಾಜ್ ಅವರ ಮೇಲೆ ಟ್ರಾಕ್ಟರ್ ಹರಿದಿದೆ.
ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ನಟರಾಜ್ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಹೆಬ್ಬಾಳ ಸಂಚಾರ ಪೊಲೀಸರು ಟ್ರಾಕ್ಟರ್ ಅಪಘಾತವೆಸಗಿ ಪರಾರಿಯಾಗಿರುವ ಟ್ರಾಕ್ಟರ್ ಚಾಲಕನಿಗಾಗಿ ತೀವ್ರ ಶೋಧ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








