ಕೆಎಸ್‍ಆರ್‍ಟಿಸಿ ಬಸ್ ಹರಿದು ಪಾದಾಚಾರಿ ಸಾವು …!

ಬೆಂಗಳೂರು

       ವೇಗವಾಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಹರಿದು ಶ್ರೀನಿವಾಸ್ (46) ಎನ್ನುವರು ಮೃತಪಟ್ಟಿರುವ ದುರ್ಘಟನೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಳಾರಿ – ಬೆಂಗಳೂರು ರಸ್ತೆಯ ಬೈಪಾಸ್ ಬಳಿ ನಡೆದಿದೆ

         ಕೂಲಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಕೆಲಸ ಮುಗಿಸಿಕೊಂಡು ಮನೆಗೆ ಭಾನುವಾರ ರಾತ್ರಿ 7.30ರ ವೇಳೆ ನಡೆದುಕೊಂಡು ಹೋಗುತ್ತಿದ್ದಾಗ ಚಿಕ್ಕಬಳ್ಳಾಪುರದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಬಸ್ ಹರಿದು ಈ ದುರ್ಘಟನೆ ಸಂಭವಿಸಿದೆ. ಪ್ರಕರಣ ದಾಖಲಿಸಿರುವ ದೇವನಹಳ್ಳಿ ಸಂಚಾರ ಪೊಲೀಸರು, ಬಸ್ ಚಾಲಕ ವೆಂಕಟಸ್ವಾಮಿಯನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link