ಬರಗೂರು
ಸಿರಾ ತಾಲ್ಲೂಕು ಬರಗೂರು ಗ್ರಾಮದಲ್ಲಿ ಶುದ್ದ ನೀರಿನ ಘಟಕಗಳು ಇದ್ದರೂ, ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಇಲ್ಲದಂತಾಗಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಬಿ.ಸಿ. ಬಸವರಾಜು ಆರೋಪಿಸಿದ್ದಾರೆ.ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳು ಇದ್ದರೂ, ಇವುಗಳು ಕಾರ್ಯವಹಿಸುತ್ತಿಲ್ಲ. ಈ ಬಗ್ಗೆ ಗ್ರಾಮ ಪಂಚಾಯಿತಿ ಯಾವುದೇ ಜಾಗೃತಿ ವಹಿಸಿಲ್ಲ.
ಸುಮಾರು ದಿನಗಳಿಂದಲೂ 2-3 ಕಿಮೀ ದೂರದ ಬೇರೆ ಊರಿನಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕದಿಂದ ಬರಗೂರು ನಿವಾಸಿಗಳು ನೀರು ತಂದು ಕುಡಿಯುವ ದುಃಸ್ಥಿತಿ ಅನುಭವಿಸುತ್ತಿದ್ದಾರೆ. ಹಾಲಿ ಇರುವ ಎರಡು ಶುದ್ದ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಈ ಪರಿಸ್ಥಿತಿ ಎದುರಾಗಿದೆ. ಈ ಕೂಡಲೆ ಸಂಬಂಧ ಪಟ್ಟವರು ಶುದ್ದ ಕುಡಿಯುವ ನೀರಿನ ಘಟಕಗಳನ್ನು ದುರಸ್ಥಿ ಮಾಡಿಸುವಂತೆ ಜನತೆ ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
