ಬೆಂಗಳೂರು
ನಗರದಲ್ಲಿ ಬಿಎಂಟಿಸಿ ಬಸ್‌ಗಳು ಸಂಚಾರಕ್ಕಾಗಿ ಪ್ರತ್ಯೇಕ ಪಥಗಳಲ್ಲಿ ಬಿಎಂಟಿಸಿ ಬಸ್‌ಗಳು ಪ್ರಾಯೋಗಿಕ ಸಂಚಾರ ಆರಂಭಿಸಿದ್ದು ನಾಗರೀಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ
ಬಿಎಂಟಿಸಿ ಬಸ್ಸುಗಳ ಸಂಚಾರಕ್ಕಾಗಿ ಪ್ರತ್ಯೇಕ ಪಥವನ್ನು ಬೆಂಗಳೂರು ಸಂಚಾರಿ ಪೊಲೀಸ್ ಮತ್ತು ಬಿಎಂಟಿಸಿ ಜಂಟಿಯಾಗಿ ಜಂಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ಇನ್ನೂ ಕೆಲವು ರಸ್ತೆಗಳಲ್ಲಿ ಪ್ರತ್ಯೇಕ ಬಸ್ ಲೇನ್ ನಿರ್ಮಿಸಲು ಸರ್ಕಾರ ಮುಂದಾಗಿದೆ .ಎಂಟಿಸಿಯ ವೊಲ್ವೊ ಬಸ್‌ಗಳ ಬದಲಾಗಿ ಎಲೆಕ್ಟ್ರಿಕ್ ಬಸ್ಸುಗಳನ್ನು ನಗರದ ೧೨ ಪ್ರಮುಖ ರಸ್ತೆಗಳಲ್ಲಿ ನಿರ್ಮಿಸುವ ಪ್ರತ್ಯೇಕ ಪಥದಲ್ಲಿ ಸಂಚರಿಸಲು ಯೋಜನೆ ರೂಪಿಸಲಾಗಿದೆ.ಮೊದಲ ಹಂತದಲ್ಲಿ ಬೈಯಪ್ಪನಹಳ್ಳಿ-ಕೆಆರ್ ಪುರ ನಡುವಿನ ೧೮.೫ ಕಿ.ಮೀ ಉದ್ದ ರಸ್ತೆಯಲ್ಲಿ ಪ್ರತ್ಯೇಕ ಪಥ ನಿರ್ಮಾಣ ಮಾಡಲಾಗುತ್ತಿದೆ. ಬಿಎಂಟಿಸಿ ಬಸ್ ಪಥ ೩.೫ ಮೀ. ಅಗಲವಿರಲಿದ್ದು, ರಸ್ತೆಯಲ್ಲಿ ಬೊಲಾರ್ಡ್‌ಗಳನ್ನು ಹಾಕಲಾಗುತ್ತಿದೆ. ರಾತ್ರಿ ವೇಳೆ ಇತರ ಸವಾರರಿಗೆ ಈ ರಸ್ತೆ ಸರಿಯಾಗಿ ಕಾಣುವಂತೆ ಪ್ರತಿಫಲಕಗಳನ್ನು ಅಳವಡಿಸಲಾಗುತ್ತಿದೆ. ಹಾಗೂ ಈ ಪಥಗಳಲ್ಲಿ ಇತರ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ನಗರದಲ್ಲಿ ಒಟ್ಟು ೬,೫೦೦ ಬಿಎಂಟಿಸಿ ಬಸ್‌ಗಳು ಸಂಚರಿಸುತ್ತಿವೆ. ಪ್ರತಿ ನಿತ್ಯ ೬.೨೦೦ ಬಸ್‌ಗಳ ಕಾರ್ಯಾಚರಣೆ ನಡೆಯುತ್ತಿದೆ. ಸಂಚಾರ ದಟ್ಟಣೆಯಿಂದ ಬಸ್‌ಗಳು ನಿಗದಿತ ಸ್ಥಳಗಳನ್ನು ತಲುಪುವಲ್ಲಿ ವಿಳಂಬವಾಗುತ್ತಿದೆ ಎಂದು ಪ್ರಯಾಣಿಕರು ಆರೋಪಿಸುತ್ತಿದ್ದ ಹಿನ್ನೆಲೆ ಅಧಿಕ ಸಂಚಾರವಿರುವ ೧೨ ರಸ್ತೆಗಳಲ್ಲಿ ಬಸ್‌ಗಳಿಗೆ ಪ್ರತ್ಯೇಕ ಪಥ ನಿರ್ಮಾಣಕ್ಕೆ ಬಿಎಂಟಿಸಿ ಮುಂದಾಗಿದೆ.
ಅ. ೨೦ ರಿಂದ ಪ್ರಾಯೋಗಿಕವಾಗಿ ಪ್ರತ್ಯೇಕ ಪಥದಲ್ಲಿ ಬಸ್ ಸಂಚಾರ ಆರಂಭಗೊಳ್ಳಲಿದೆ. ಕೆಆರ್ ಪುರದಿಂದ ಮಾರತ್‌ಹಳ್ಳಿಯವರೆಗೆ ಪ್ರತ್ಯೇಕ ಪಥ ಸಂಚಾರ ಆರಂಭಗೊಳ್ಳಲಿದ್ದು, ಸಂಚಾರ ದಟ್ಟಣೆಯಲ್ಲಿ ಬಿಎಂಟಿಸಿ ಬಸ್‌ಗಳು ಸಿಲುಕುವುದನ್ನು ತಪ್ಪಿಸಲು ಪ್ರತ್ಯೇಕ ಪಥ ನಿರ್ಮಾಣ ಮಾಡಲಾಗುತ್ತಿದೆ. ಈ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








