ಬೆಂಗಳೂರು
ಕೊರೊನಾ ಸೋಂಕಿನ ಮಧ್ಯೆ ಕರ್ನಾಟಕದ ಹಲವೆಡೆ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜನ ಅತ್ಯಂತ ಜಾಗೃತೆವಹಿಸಿ. ಜ್ವರ, ಕೆಮ್ಮು, ನೆಗಡಿ, ಶೀತ ಮತ್ತಿತರೇ ರೋಗ ಲಕ್ಷಣಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ಮಾಡಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಅವರು, ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣವೇ ಆರೋಗ್ಯ ಇಲಾಖೆಯ ಸಹಾಯವಾಣಿ 104 ಕರೆ ಮಾಡಿ ಮಾಹಿತಿ ಪಡೆಯುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರಿನ 11 ಕೋವಿಡ್ ಕೇರ್ ಸೆಂಟರ್‌ನಲ್ಲಿ 4 ಸಾವಿ ರದ 276 ಹಾಸಿಗೆಗಳಿವೆ. ಇಂದು ಈ ಪೈಕಿ 936 ಬೆಡ್‌ಗಳು ಅಂದರೆ ಶೇಕಡಾ 27.79ರಷ್ಟು ಖಾಲಿ ಇವೆ. 3346 ಸೋಂಕಿತರ ಪೈಕಿ 306 ಮಂದಿ ಇಂದು ಗುಣಮುಖರಾಗಿದ್ದಾರೆ ಎಂದು ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ