ಮಂಗಳೂರು:
ಮಂಗಳೂರಿನಿಂದ ಬೆಂಗಳೂರಿಗೆ ಬರಲು ಇರುವ ಮಾರ್ಗಗಳಲ್ಲಿ ಪ್ರಮುಖವಾದದ್ದು ಚಾರ್ಮಡಿ ಘಾಟ್ ರಸ್ತೆ ಎಲ್ಲಾ ರೀತಿಯಲ್ಲೂ ಅನುಕೂಲವಾಗಿದ್ದು ಚಾರ್ಮಡಿ ಘಾಟ್ ನಲ್ಲಿ ಭಾರಿ ವಾಹನಗಳ ಸದ್ದೆ ಹೆಚ್ಚಿದ್ದು ರಸ್ತೆ ಕುಸಿಯುವ ಸಂಭವ ಹೆಚ್ಚಿರುವ ಕಾರಣದಿಂದ ಚಾರ್ಮಾಡಿ ಘಾಟ್‌ನಲ್ಲಿ ಭಾರೀ ವಾಹನಗಳಿಗೆ ನಿಷೇಧ ಹೇರಿದ್ದು ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನಗಳಿಗೆ ನ.28ರಿಂದ ದಿನದ 24 ಗಂಟೆಯೂ ಮುಕ್ತ ಪ್ರವೇಶವಿದೆ. ಆದರೆ ಎಲ್ಲ ರೀತಿಯ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ಆದೇಶವು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಬುಧವಾರ ಆದೇಶ ಹೊರಡಿಸಿದ್ದಾರೆ.
ಚಾರ್ಮಾಡಿ ಘಾಟ್‌ನಲ್ಲಿ ನಿರಂತರವಾಗಿ ಸುರಿದ ಭಾರೀ ಮಳೆಗೆ ರಸ್ತೆಗಳು ಸಂಪೂರ್ಣ ಹಾಳಾಗಿದ್ದವು. ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು-ವಿಲ್ಲಪುರಂ ರಸ್ತೆಯ 76 ಕಿ.ಮೀ.ನಿಂದ 86 ಕಿ.ಮೀ.ವರೆಗಿನ ರಸ್ತೆಯ ಮಾರ್ಗದಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಸೆ.15ರಿಂದ ಲಘು ವಾಹನಗಳಿಗೆ ಮಾತ್ರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಸಂಚಾರಕ್ಕೆ ಅವಕಾಶ ಕಲ್ಪಿಸಿ ಕೊಡಲಾಗಿತ್ತು. ಇದೀಗ ಈ ಆದೇಶವನ್ನು ಮಾರ್ಪಾಡಿಸಿರುವ ಜಿಲ್ಲಾಧಿಕಾರಿ, ಲಘು ವಾಹನಗಳಿಗೆ 24 ಗಂಟೆಯೂ ಸಂಚಾರಕ್ಕೆ ಮುಕ್ತಗೊಳಿಸಿದ್ದರೆ, ಭಾರೀ ವಾಹನಗಳ ಸಂಚಾರದ ನಿಷೇಧವನ್ನು ಮುಂದುವರಿಸಿದ್ದಾರೆ.
