ಬೆಂಗಳೂರು
ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತದ ನಂತರ ಧಾರ್ಮಿಕ ದತ್ತಿ ಇಲಾಖೆಯು ಎಲ್ಲ ದೇಗುಲಗಳಲ್ಲಿ ಪ್ರಸಾದ ವಿತರಣೆಗೆ ಅನುಮತಿ ಕಡ್ಡಾಯಗೊಳಿಸಲು ನಿರ್ಧರಿಸಿದೆ.
ಪ್ರಸಾದ ವಿತರಣೆಗೆ ಅನುಮತಿ ಪಡೆಯಬೇಕೆಂಬ ನಿಯಮ ಮೊದಲಿನಿಂದಲೂ ಇದೆ. 2012ರಲ್ಲೇ ಇದರ ಕುರಿತು ನಾವು ಸುತ್ತೋಲೆ ಹೊರಡಿಸಿದ್ದೆವು. ಆದರೆ ಅದರ ಕಟ್ಟು ನಿಟ್ಟಾಗಿ ಜಾರಿಗೊಳಿಸಿರಲಿಲ್ಲ ಆದರೆ ಮತ್ತೊಮ್ಮೆ ಬದಲಾದ ನಿಯಮ ಇರುವ ಸುತ್ತೋಲೆಯನ್ನು ಹೊರಡಿಸಲು ನಿರ್ಧರಿಸಲಾಗಿದೆ ಎಂದು ಮುಜಾರಾಯಿ ಇಲಾಖೆಯ ಜಂಟಿ ಆಯುಕ್ತ ಜಯಪ್ರಕಾಶ್ ತಿಳಿಸಿದ್ದಾರೆ.
ಎಲ್ಲಾ ಮುಜರಾಯಿ ದೇವಾಲಯಗಳ ಅಡುಗೆ ಕೋಣೆಯಲ್ಲಿ ಭಟ್ಟರು ಹಾಗೂ ಸಹಾಯಕರನ್ನು ಬಿಟ್ಟು ಬೇರೆ ಯಾರನ್ನೂ ಸೇರಿಸಬಾರದು. ಹಾಗೇ ಸಿಸಿಟಿವಿಯನ್ನು ಕಡ್ಡಾಯ ಮಾಡಲಾಗುತ್ತದೆ ಎಂದು ಜಯಪ್ರಕಾಶ್ ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ