ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಬೆಂಗಳೂರು

        ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ನಡೆದಿದೆ.ಅಗರದ ರಾಜು (62)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ. ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ಬಿಎಂಟಿಸಿ ಬಸ್‍ಗೆ ಹೋಗಲು ರಾಜು ಅವರು ಸೋಮವಾರ ಮಧ್ಯಾಹ್ನ 3ರ ವೇಳೆ ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದಿದೆ.

        ಡಿಕ್ಕಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ರಾಜು ಅವರನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ಮೃತಪಟ್ಟಿದ್ದಾರೆ.

       ಪ್ರಕರಣ ದಾಖಲಿಸಿರುವ ಉಪ್ಪಾರಪೇಟೆ ಸಂಚಾರ ಪೊಲೀಸರು ಬಸ್ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆಂದು ಡಿಸಿಪಿ ಸೌಮ್ಯಾರಾಣಿ ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap