ಆಟೋ ಡಿಕ್ಕಿ ಹೊಡೆದು ವ್ಯಕ್ತಿ ಸಾವು..!!

ಬೆಂಗಳೂರು

       ಮಗಳ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ ತಂದೆಯೊಬ್ಬರು ಆಟೋ ಡಿಕ್ಕಿ ಹೊಡೆದು ಮೃತಪಟ್ಟಿರುವ ದುರ್ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ನಂಜಪ್ಪ ವೃತ್ತದಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ನಾರಾಯಣಪ್ಪ (70)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ. ದೊಡ್ಡಬೊಮ್ಮಸಂದ್ರದಲ್ಲಿದ್ದ ಮಗಳನ್ನು ನೋಡಲು ಬ್ಯಾಡಗಿಯಿಂದ ಬಂದಿದ್ದ ನಾರಾಯಣಪ್ಪ ರಾತ್ರಿ 10.30ರ ವೇಳೆ ನಂಜಪ್ಪ ವೃತ್ತದಲ್ಲಿ ಬಸ್ ಇಳಿದು ರಸ್ತೆ ದಾಟುತ್ತಿದ್ದರು.

         ಈ ವೇಳೆ ವೇಗವಾಗಿ ಬಂದ ಆಟೋ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ 2ರ ವೇಳೆ ಮೃತಪಟ್ಟಿದ್ದಾರೆ.
ಪ್ರಕರಣ ದಾಖಲಿಸಿರುವ ಯಲಹಂಕ ಸಂಚಾರ ಪೊಲೀಸರು, ಆಟೋ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸಾರಾ ಪಾತಿಮಾ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link