ದೂರವಾಣಿ ಕದ್ದಾಲಿಕೆ ತನಿಖೆಗೆ ಕ್ರಮ:ಎಂ.ಬಿ.ಪಾಟೀಲ್

ಬೆಂಗಳೂರು 

        ಇತರೆ ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲೂ ದೂರವಾಣಿ ಕದ್ದಾಲಿಕೆ ತನಿಖೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

         ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಗೃಹಸಚಿವರು, ದೂರವಾಣಿ ಕದ್ದಾಲಿಕೆ ತನಿಖೆ ನಡೆಸಲು ಪೊಲೀಸರಿಗೆ ತರಬೇತಿ ನೀಡಲಾಗುವುದು. ಬೇರೆ ರಾಜ್ಯಗಳಲ್ಲಿನ ಪೊಲೀಸ್ ಇಲಾಖೆಯಲ್ಲಿ ಜಾರಿಯಲ್ಲಿರುವ ಉತ್ತಮ ಕ್ರಮಗಳನ್ನು ಅಧ್ಯಯನ ಮಾಡಿ, ಅದನ್ನು ರಾಜ್ಯದಲ್ಲಿ ಅಳವಡಿಸಲು ಕ್ರಮಕೈಗೊಳ್ಳಲಾಗುವುದು. ದೂರವಾಣಿ ಕದ್ದಾಲಿಕೆ ಪ್ರಕರಣಗಳ ತನಿಖೆಗೆ ಕ್ರಮಕೈಗೊಂಡಲ್ಲಿ ಮುಂದೆ ಇದು ನಡೆಯುವುದಿಲ್ಲ ಎಂದರು.

        ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ದಾಖಲಿಸಲಾಗಿದ್ದು, ಸಾಹಿತಿ ಎಂ.ಎಂ.ಕಲಬುರಗಿ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು.ಗೃಹ ಸಚಿವ ಎಂ.ಬಿ.ಪಾಟೀಲ್ ಫೋನ್ ಕದ್ದಾಲಿಕೆಗೆ ಕ್ರಮ ಹೇಳಿಕೆಗೆ ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿ, ಸಚಿವರು ಈಗೇಕೆ ಫೋನ್ ಕದ್ದಾಲಿಕೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ ಎನ್ನುವುದು ಗೊತ್ತಿಲ್ಲ. ಎಂ.ಬಿ.ಪಾಟೀಲರ ಜೊತೆ ಮಾತನಾಡಿದ ಬಳಿಕ ಪ್ರತಿಕ್ರಿಯಿಸುವುದಾಗಿ ತಿಳಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link