ಬೆಂಗಳೂರು
ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪ್ರಾದೇಶಿಕ ಜನಸಂಪರ್ಕ ಕಾರ್ಯಾಲಯ, ಬೆಂಗಳೂರಿನ ಗಾಂಧೀ ಭವನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ (ಅಕ್ಟೋಬರ್ 2 ರಿಂದ 4 ರ ವರೆಗೆ)_ ಮಹಾತ್ಮಾ ಗಾಂಧಿ ಅವರ ` 150ನೆಯ ಜನ್ಮ ವರ್ಷಾಚರಣೆ ‘ ಪ್ರಯುಕ್ತ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಿದೆ.
ಛಾಯಾಚಿತ್ರ ಪ್ರದರ್ಶನವನ್ನು ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಉದ್ಘಾಟಿಸಿದರು. ಮೂರು ದಿನಗಳ ಕಾಲ ನಡೆಯಲಿರುವ ಛಾಯಾಚಿತ್ರ ಪ್ರದರ್ಶನದಲ್ಲಿ ಮಹಾತ್ಮಾ ಗಾಂಧಿ ಅವರ ಜೀವನ ಹಾಗೂ ಸಾಧನೆ ಕುರಿತ ಅಪರೂಪದ ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಪ್ರದರ್ಶನ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಗಾಗಿ ಉಚಿತವಾಗಿ ತೆರೆದಿರುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
