ವಿಕಲಚೇತನರು ಯಾವುದರಲ್ಲೂ ಕಡಿಮೆ ಇಲ್ಲ.

ಹೊಸಪೇಟೆ :

          ವಿಕಲಚೇತನರು ಯಾವುದೇ ಕೆಲಸವನ್ನು ನಿಷ್ಠೆಯಿಂದ ಶ್ರದ್ದೆಯಿಂದ ನಿರ್ವಹಿಸುತ್ತಾರೆ. ಕೆಲಸ ಕಾರ್ಯಗಳಲ್ಲಿ ಅವರು ಯಾವುದೇ ತೊಂದರೆ ಮಾಡಿಕೊಳ್ಳುವುದಿಲ್ಲ. ಹೀಗಾಗಿ ಅವರು ಯಾರಿಗೇನು ಕಮ್ಮಿ ಇಲ್ಲ ಎಂದು 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಕೆ.ಎಂ.ರಾಜಶೇಖರ ಅಭಿಪ್ರಾಯಪಟ್ಟರು.

           ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಸೋಮವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಹೊಸಪೇಟೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ‘ವಿಕಲಚೇತನರ ದಿನಾಚರಣೆ’ಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿಕಲಚೇತನರು ಯಾವುದೇ ಕೆಲಸ ಕೊಟ್ಟರೂ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸುತ್ತಾರೆ. ಜೊತೆಗೆ ಬಹಳ ಶ್ರದ್ದೆಯಿಂದ ನಿಷ್ಠೆಯಿಂದ ಕೆಲಸ ಮಾಡಿ ಜನ ಮನ್ನಣೆ ಗಳಿಸುತ್ತಾರೆ. ಹೀಗಾಗಿ ಅವರ ಕೆಲಸಗಳಲ್ಲಿ ತೊಂದರೆಗಳು ಬಹಳ ಕಡಿಮೆ ಎಂದರು.

          ಸರ್ಕಾರ ವಿಕಲಚೇತನರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಸದುಪಯೋಗ ಮಾಡಿಕೊಳ್ಳಬೇಕು. ವಿಕಲಚೇತನರಿಗೆ ಯಾವುದೇ ಕಾನೂನು ಸಮಸ್ಯೆಗಳು ಎದುರಾದಾಗ ತಾಲೂಕು ಕಾನೂನು ಸೇವಾ ಸಮಿತಿಯಿಂದ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

        ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಆನಂದ ಚೌಹಾಣ್, ಹೆಚ್ಚುವರಿ ನ್ಯಾಯಾಧೀಶ ಶಿವನಗೌಡ, ಪ್ರಧಾನ ಕಿರಿಯ ಸಿವಿಲ್ ನ್ಯಾಯಾಧೀಶೆ ಪೂರ್ಣಿಮಾ ಯಾದವ್, 2ನೇ ಹೆಚ್ಚುವರಿ ಕಿರಿಯ ನ್ಯಾಯಾಧೀಶೆ ಮಂಜು, ವಕೀಲರ ಸಂಘದ ಅಧ್ಯಕ್ಷ ಉಮೇಶ, ಕಾರ್ಯದರ್ಶಿ ವೀರನಗೌಡ, ವಿಕಲಚೇತನರ ಸಂಘದ ಅಧ್ಯಕ್ಷ ಎನ್.ವೆಂಕಟೇಶ ಸೇರಿದಂತೆ ನೂರಾರು ವಿಕಲಚೇತನರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link